News Karnataka Kannada
Monday, May 13 2024
ವಿದೇಶ

ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸಿದ ಪ್ರಧಾನಿ ನರೇಂದ್ರ ಮೋದಿ

Air show is a symbol of country's progress: PM Narendra Modi
Photo Credit : News Kannada

ಜಪಾನ್‌: ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲಿನ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ  ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, “ನನ್ನ ಆತ್ಮೀಯ ಸ್ನೇಹಿತ ಶಿಂಜೋ ಅಬೆ ಮೇಲಿನ ದಾಳಿಯಿಂದ ನಾನು ತುಂಬಾ ದುಃಖಿತನಾಗಿದ್ದೇನೆ. ನಾವೆಲ್ಲರೂ ಅವರ ಕುಟುಂಬದೊಂದಿಗೆ, ಜಪಾನ್ ಜನರೊಂದಿಗೆ ಇದ್ದೇವೆ” ಎಂದು ಬರೆದುಕೊಂಡಿದ್ದಾರೆ.

ಶಿಂಜೋ ಅಬೆ ಅವರು ನರೇಂದ್ರ ಮೋದಿ ಅವರ ಅತ್ಯಂತ ವಿಶ್ವಾಸಾರ್ಹ ಸ್ನೇಹಿತರಲ್ಲಿ ಒಬ್ಬರು ಎಂದು ಈ ಹಿಂದೆ ಹಲವು ಬಾರಿ ಘೋಷಿಸಿದ್ದು ಗೊತ್ತೇ ಇದೆ. ಮೇಲಾಗಿ ಪ್ರಧಾನಿ ಮೋದಿ ಅವರು ಗುಜರಾತ್ ಸಿಎಂ ಆಗಿದ್ದ ಅವಧಿಯಲ್ಲಿ ಹಲವು ಬಾರಿ ಜಪಾನ್ ಗೆ ಹೋಗಿದ್ದರು. ಮೋದಿ ಪ್ರಧಾನಿಯಾದ ನಂತರವೂ ಅಬೆ ಅವರು ಭಾರತದೊಂದಿಗೆ ನಿಕಟ ಸಂಬಂಧವನ್ನು ಇಟ್ಟುಕೊಂಡಿದ್ದರು. ನಮ್ಮ ಈ ಸಂಬಂಧ ಶಾಶ್ವತವಾಗಿರುತ್ತದೆ ಎಂದು ಇಬ್ಬರು ನಾಯಕರೂ ಬಹಿರಂಗಪಡಿಸುತ್ತಿದ್ದರು.

ಶಿಂಜೋ ಅಬೆ ಅವರ ಆರೋಗ್ಯ ಸ್ಥಿತಿ ಗಂಭೀರ
ಶಿಂಜೋ ಅಬೆ ಅವರ ಮೇಲೆ ನಾರಾದಲ್ಲಿ  ಬೆಳಿಗ್ಗೆ 8:30 ಕ್ಕೆ ಗುಂಡು ಹಾರಿಸಲಾಯಿತು. ಮಾಜಿ ಪ್ರಧಾನಿಯವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಜಪಾನ್‌ನ ಮುಖ್ಯ ಕ್ಯಾಬಿನೆಟ್ ಕಾರ್ಯದರ್ಶಿ ಹಿರೊಕಾಜು ಮಾಟ್ಸುನೊ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು