ಬಾಂಗ್ಲದೇಶ : ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಕ್ ಹಸೀನಾ ರಾಜಿನಾಮೆ ಕೊಟ್ಟ ಬೆನ್ನಲ್ಲೇ ಇದೀಗ ಥೈಲ್ಯಾಂಡ್ ಪ್ರಧಾನಿ ಶ್ರೆತ್ತಾ ಥವಿಸಿನ್ ಅವರನ್ನು ಅಧಿಕಾರದಿಂದ ತೆಗೆದುಹಾಕಲಾಗಿದೆ.
ಸಂವಿಧಾನಿಕ ನಿಯಮವನ್ನು ಉಲ್ಲಂಘಿಸಿದ್ದಕ್ಕಾಗಿ ಥೈಲ್ಯಾಂಡ್‌ನ ಸಂವಿಧಾನಿಕ ನ್ಯಾಯಾಲಯ ಪ್ರಧಾನಿ ಶ್ರೆತ್ತಾ ಥಾವಿಸಿನ್ ಅವರ ವಿರುದ್ಧ ಮತ ಹಾಕಿ ಅವರನ್ನು ಅಧಿಕಾರದಿಂದ ಕಿತ್ತೆಸೆದಿದೆ. ಪ್ರಧಾನಿ ಶ್ರೆತ್ತಾ ಥಾವಿಸಿನ್ ಅಪರಾಧ ಹಿನ್ನೆಲೆಯೊಳ್ಳ ವ್ಯಕ್ತಿಯೊಬ್ಬರನ್ನು ಸಚಿವ ದರ್ಜೆಯ ಹುದ್ದೆಗೆ ನೇಮಕ ಮಾಡುವ ಮೂಲಕ ಸಂವಿಧಾನದ ನಿಯಮವನ್ನು ಉಲ್ಲಂಘಿಸಲಾಗಿದೆ ಎಂದು ಈ ಕ್ರಮಕೈಗೊಳ್ಳಲಾಗಿದೆ.
ಮಹತ್ವದ ಬೆಳವಣಿಗೆಯೊಂದರಲ್ಲಿ ಇಂದು ಥೈಲ್ಯಾಂಡ್‌ನ ಸಾಂವಿಧಾನಿಕ ನ್ಯಾಯಾಲಯ ಪ್ರಧಾನಿ ಶ್ರೆತ್ತಾ ಥಾವಿಸಿನ್ ಅವರನ್ನು ಅನರ್ಹಗೊಳಿಸಲು ಮತ ಚಲಾಯಿಸಿತು. ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಯನ್ನು ಕ್ಯಾಬಿನೆಟ್ ದರ್ಜೆಗೆ ನೇಮಕ ಮಾಡುವ ಮೂಲಕ ಅವರು ನೈತಿಕ ಮಾನದಂಡಗಳನ್ನು ಉಲ್ಲಂಘಿಸಿದ್ದಾರೆ ಎಂದು ತೀರ್ಪು ನೀಡಿದ ಕೋರ್ಟ್ ಅವರನ್ನು ಕೂಡಲೇ ಮತದಾನ ಮಾಡಿ ವಜಾ ಮಾಡಿದೆ. 5-4 ಮತಗಳೊಂದಿಗೆ ಶ್ರತ್ತಾ ಸಚಿವ ಸಂಪುಟದಲ್ಲಿರು ಎಲ್ಲಾ ಸಚಿವ ಸ್ಥಾನಗಳನ್ನು ಜೊತೆಗೆ ವಜಾಗೊಳಿಸಲಾಗಿದೆ. ರಾಜಕೀಯ ಬದಲಾವಣೆಯ ಈ ಸಮಯದಲ್ಲಿ ಉಪಪ್ರಧಾನಿ ಮತ್ತು ವಾಣಿಜ್ಯ ಸಚಿವ ಫುಮ್ತಾಮ್ ವೆಚಯಾಚೈ ಅವರು ಹಂಗಾಮಿ ಪ್ರಧಾನ ಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಾರೆ.

