ಢಾಕಾ: ಬಾಂಗ್ಲಾದೇಶದಲ್ಲಿ ಉಂಟಾಗಿರುವ ಅರಾಜಕತೆ ವೇಳೆ ನಿರ್ಗಮಿತ ಪ್ರಧಾನಿ ಶೇಕ್ ಹಸೀನಾ ಅವರ ಗಾನಾಭವನ ನಿವಾಸಕ್ಕೆ ನುಗ್ಗಿದ್ದ ಪ್ರತಿಭಟನಾಕಾರರು ಸಿಕ್ಕಿದ್ದನ್ನೂ ದೋಚಿದ್ದಲ್ಲದೇ ಸೀರೆ, ಒಳಉಡುಪುಗಳನ್ನೂ ಹೊತ್ತೊಕೊಂಡು ಹೋಗಿದ್ದಾರೆ. ಈ ಕುರಿತ ಫೋಟೊ, ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ರಾಜೀನಾಮೆ ನೀಡಿ, ದೇಶ ಬಿಟ್ಟು ಪರಾರಿಯಾಗುತ್ತಿದ್ದಂತೆ ನಿರ್ಗಮಿತ ಪ್ರಧಾನಿ ಶೇಕ್ ಹಸೀನಾ ಅವರ ಗಾನಾಭವನ ನಿವಾಸಕ್ಕೆ ನುಗ್ಗಿದ್ದ ಪ್ರತಿಭಟನಾಕಾರರು ಸಿಕ್ಕಿದ್ದನ್ನೂ ದೋಚಿದ್ದಲ್ಲದೇ ಸೀರೆ, ಒಳಉಡುಪುಗಳನ್ನೂ ಹೊತ್ತೊಕೊಂಡು ಹೋಗಿದ್ದಾರೆ. ಪ್ರತಿಭಟನಾಕಾರರು ಶೇಖ್ ಹಸೀನಾ ಅವರ ಸೀರೆ, ಒಳಉಡುಪನ್ನೂ ಕದ್ದು, ಅದರ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಇದರ ಜೊತೆಗೆ ಸೋಫಾ, ಅಡುಗೆಮನೆಯಿಂದ ಹಸಿ ಮೀನು, ಕೋಳಿ, ಬಾತುಕೋಳಿ ಕದ್ದು, ಅಲ್ಲಿದ್ದ ಊಟ ಮಾಡಿ, ಶೇಖ್ ಹಸೀನಾ ಅವರ ಬೆಡ್ ರೂಂ ನಲ್ಲಿ ಮಲಗಿದ್ದಾರೆ.
ಇನ್ನು ಶೇಖ್ ಹಸೀನಾ ರಾಜೀನಾಮೆ ನೀಡುವ ಮುನ್ನ ಬಾಂಗ್ಲಾದೇಶದ ಬಂಗಬಂಧು ಸ್ಮಾರಕ ವಸ್ತುಸಂಗ್ರಹಾಲಯ ಎಂದೂ ಕರೆಯಲ್ಪಡುವ ಬಂಗಬಂಧು ಭವನ್ ಸೇರಿದಂತೆ ಢಾಕಾದ ಹಲವಾರು ಪ್ರಮುಖ ಸ್ಥಳಗಳಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ.
https://x.com/odd_me_out2/status/1820456908521603455/photo/1