Categories: ವಿದೇಶ

ಕ್ವಾಡ್‌ ಶೃಂಸಭೆ ರದ್ದು, ಮೇ 23ಕ್ಕೆ ಆಸ್ಟ್ರೇಲಿಯಾಕ್ಕೆ ಪ್ರಧಾನಿ ನರೇಂದ್ರ ಮೋದಿ

ಸಿಡ್ನಿ: ಮುಂದಿನ ವಾರ ನಡೆಯಬೇಕಿದ್ದ ಕ್ವಾಡ್ ಶೃಂಗಸಭೆ ರದ್ದಾಗಿದೆ ಎಂದು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ತಿಳಿಸಿದ್ದಾರೆ. ಆದರೆ ಪ್ರಧಾನಿ ಮೋದಿ ಅವರು ಮುಂದಿನ ವಾರ ಸಿಡ್ನಿಗೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ. ಮೇ 24ರಂದು ಕ್ವಾಡ್‌ ಸಭೆ ನಡೆಯಬೇಕಿತ್ತು. ಆದರೆ ದೇಶದಲ್ಲಿ ಸಾಲ ಬಿಕ್ಕಟ್ಟು ನಿರ್ವಹಣೆ ನಿಟ್ಟಿನಲ್ಲಿ ಕೊನೆಯ ಕ್ಷಣದಲ್ಲಿ ಯುಎಸ್ ಅಧ್ಯಕ್ಷ ಜೋ ಬಿಡೆನ್ ಕೊನೆಯ ಕ್ಷಣದಲ್ಲಿ ಸಭೆಯಿಂದ ಹಿಂದೆ ಸರಿದ ನಂತರ ಸಭೆ ರದ್ದಾಗಿದೆ. ಮುಂಬರುವ ದಿನಗಳಲ್ಲಿ ಕ್ವಾಡ್ ಗುಂಪಿನ (ಯುಎಸ್, ಜಪಾನ್, ಭಾರತ ಮತ್ತು ಆಸ್ಟ್ರೇಲಿಯಾ) ನಾಯಕರು ಜಪಾನ್‌ ನಲ್ಲಿ ನಡೆಯುವ ಜಿ 7 ರಾಷ್ಟ್ರಗಳ ಸಭೆಯಲ್ಲಿ ಭೇಟಿಯಾಗುವ ನಿರೀಕ್ಷೆಯಿದೆ.

ಮೋದಿ ಅವರು ಈ ತಿಂಗಳು ಜಪಾನ್, ಪಪುವಾ ನ್ಯೂಗಿನಿಯಾ ಮತ್ತು ಆಸ್ಟ್ರೇಲಿಯಾಕ್ಕೆ ಭೇಟಿ ನೀಡಲಿದ್ದಾರೆ. “ಪ್ರಧಾನಿ ಮೋದಿ ಅವರು ಆಸ್ಟ್ರೇಲಿಯಾದಲ್ಲಿ ದ್ವಿಪಕ್ಷೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಅಲ್ಲದೆ ಕ್ಯುಡೋಸ್ ಬ್ಯಾಂಕ್ ಅರೆನಾದಲ್ಲಿ ಮೇ 23ರಂದು ಬೃಹತ್‌ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಲ್ಬನೀಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮೇ 23 ರಂದು ಮೋದಿ ಆಸ್ಟ್ರೇಲಿಯಾಕ್ಕೆ ಭೇಟಿ ನೀಡಲಿದ್ದು, ಅಲ್ಲಿನ ಭಾರತೀಯ ಸಮೂಹದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಈಗಾಗಲೇ ಈ ಕಾರ್ಯಕ್ರಮಕ್ಕೆ 20 ಸಾವಿರಕ್ಕೂ ಹೆಚ್ಚು ಮಂದಿ ನೋಂದಾಯಿಸಿಕೊಂಡಿದ್ದಾರೆ.

Umesha HS

Recent Posts

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

36 mins ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

45 mins ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

1 hour ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

1 hour ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

2 hours ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

2 hours ago