Categories: ವಿದೇಶ

ಭಾರತದ ಸ್ಥಿತಿಯ ಕುರಿತು ಮಾತನಾಡಲು ರಾಹುಲ್‌ ಗೆ ಹೆದರಿಕೆ ಇಲ್ಲ: ಪಿತ್ರೋಡಾ

ವಾಷಿಂಗ್ಟನ್: ಮುಂಬರುವ ಅಮೇರಿಕಾ ಭೇಟಿಯ ಸಮಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಸಾರ್ವಜನಿಕ ಸಂವಾದದಲ್ಲಿ ವಿಶ್ವದಾದ್ಯಂತ ಪ್ರಜಾಪ್ರಭುತ್ವ ಎದುರಿಸುತ್ತಿರುವ ಸವಾಲುಗಳ ಕುರಿತು ಮಾತನಾಡುತ್ತಾರೆ. ಅಲ್ಲದೆ ಭಾರತದಲ್ಲಿನ ಪರಿಸ್ಥಿತಿಗಳ ಕುರಿತ ಪ್ರಶ್ನೆಗಳಿಗೆ ಉತ್ತರಿಸಲು ಹಿಂಜರಿಯುವುದಿಲ್ಲ ಎಂದು ಅವರ ನಿಕಟವರ್ತಿ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ.

ರಾಹುಲ್‌ ಗಾಂಧಿಯವರ ಪ್ರವಾಸ ಪ್ರಜಾಪ್ರಭುತ್ವಕ್ಕೆ ಶಕ್ತಿ ತುಂಬುವ ಉದ್ದೇಶ ಹೊಂದಿದೆ ಎಂದು ಪಿತ್ರೋಡಾ ಹೇಳಿದ್ದಾರೆ. ಪಿತ್ರೋಡಾ ಗಾಂಧಿ ಕುಟುಂಬದ ನಿಕಟವರ್ತಿಯಾಗಿದ್ದು, ದೀರ್ಘಕಾಲದಿಂದ ಅಮೆರಿಕಾದಲ್ಲಿ ಗಾಂಧಿ ಪರಿವಾರದ ಪ್ರವಾಸ, ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದಾರೆ.

ಟರ್ಕಿಯಿಂದ ಹಂಗೇರಿವರೆಗೆ ಮೆಕ್ಸಿಕೋದಿಂದ ಭಾರತದವರೆಗೆ “ಪ್ರಪಂಚದಾದ್ಯಂತ ಪ್ರಜಾಪ್ರಭುತ್ವ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಮಾತನಾಡಲು ನಮಗೆ ಹಕ್ಕು ಇದೆ ಎಂದು ಅವರು ಹೇಳಿದ್ದಾರೆ. ಭಾರತದಲ್ಲಿನ ಪರಿಸ್ಥಿತಿಯ ಬಗ್ಗೆ ಗಾಂಧಿ ಮಾತನಾಡುತ್ತಾರೆಯೇ ಎಂಬ ಪ್ರಶ್ನೆಗೆ, ಪಿತ್ರೋಡಾ, “ಹೌದು ಎಂದು ಉತ್ತರಿಸಿದ್ದಾರೆ.

ಈ ಹಿಂದೆ ವಿದೇಶಗಳಲ್ಲಿ ಭಾರತದ ಕುರಿತು ಆಡಿದ ಮಾತುಗಳು ವಿವಾದವಾಗಿರುವ ಕುರಿತು ಉತ್ತರಿಸಿದ ಅವರು ಅವರು ಏನು ಹೇಳಿಕೆ ನೀಡದಿದ್ದರೂ ವಿವಾದ ಹುಟ್ಟುಹಾಕಲಾಗುತ್ತದೆ ಎಂದು ತಿಳಿಸಿದ್ದಾರೆ. ಇತ್ತೀಚೆಗೆ ಬ್ರಿಟನ್‌ನ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಗಾಂಧಿಯವರ ಹೇಳಿಕೆಗಳು ತೀವ್ರ ಟೀಕೆಗೆ ಗುರಿಯಾಗಿದ್ದನ್ನು ಇಲ್ಲಿ ಮನಗಾಣಬಹುದು.

ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯ ಮತ್ತು ಡಯಾಸ್ಪೊರಾ ಸದಸ್ಯರೊಂದಿಗೆ ಸಂವಾದಕ್ಕಾಗಿ ರಾಹುಲ್‌ ಮೊದಲು ಪಶ್ಚಿಮ ಕರಾವಳಿಗೆ ಪ್ರಯಾಣಿಸುತ್ತಾರೆ ಮತ್ತು ನಂತರ ವಾಷಿಂಗ್ಟನ್ ಡಿಸಿ ಮೂಲಕ ಪೂರ್ವ ಕರಾವಳಿಯ ನ್ಯೂಯಾರ್ಕ್‌ನಲ್ಲಿ ಸಂವಾದ ನಡೆಸಲಿದ್ದಾರೆ.

Gayathri SG

Recent Posts

ರೆಸ್ಟೋರೆಂಟ್‌ನಲ್ಲಿ ಪತ್ನಿಯನ್ನು ಹೊಡೆದು ಕೊಂದ ಮಾಜಿ ಸಚಿವ : ವಿಡಿಯೋ ವೈರಲ್‌

ಕಜಕೀಸ್ತಾನದ  ಮಾಜಿ ಸಚಿವನೋರ್ವ ತನ್ನ ಪತ್ನಿಯನ್ನು ದಾರುಣವಾಗಿ ಥಳಿಸಿದ್ದು ಪರಿಣಾಮವಾಗಿ ಎಂಟು ಗಂಟೆಗಳಲ್ಲಿ ಆಕೆ ಕೊನೆಯುಸಿರೆಳೆದಿರುವ ದಾರುಣ ಘಟನೆ ನಡೆದಿದೆ.

3 mins ago

ಸಿಲಿಂಡರ್‌ ಬ್ಲಾಸ್ಟ್‌ನಿಂದ ಮನೆಯಲ್ಲಿ ಬೆಂಕಿ : 3 ವರ್ಷದ ಮಗು ಮೃತ್ಯು, 5 ಮಂದಿಗೆ ಗಾಯ

ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ 3 ವರ್ಷದ ಮಗು ಮೃತಪಟ್ಟು ಐವರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಾಂಭಾಜಿನಗರದಲ್ಲಿ ನಡೆದಿದೆ…

9 mins ago

ಬೀದರ್‌ನ ’14 ಪರೀಕ್ಷಾ ಕೇಂದ್ರಗಳಲ್ಲಿ ‘ನೀಟ್‌’ ಪರೀಕ್ಷೆ

'ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್‌) ಜಿಲ್ಲೆಯ 14 ಪರೀಕ್ಷಾ ಕೇಂದ್ರಗಳಲ್ಲಿ ಮೇ 5ರಂದು ನಡೆಯಲಿದೆ' ಎಂದು ನೀಟ್‌ ಸಂಯೋಜಕ…

33 mins ago

ಮೋದಿ ಬಂದರೂ ಮಾದಿಗರು ಬಿಜೆಪಿ ಬೆಂಬಲಿಸಲ್ಲ: ಚಂದ್ರಕಾಂತ ಹಿಪ್ಪಳಗಾಂವ

ತೆಲಂಗಾಣದ ಮಂದಾಕೃಷ್ಣ ಮಾದಿಗ ಅಲ್ಲ, ಸ್ವತಃ ಪ್ರಧಾನಿ ನರೇಂದ್ರ ಮೋದಿ ಬಂದರೂ ಮಾದಿಗರು ಬಿಜೆಪಿಗೆ ಮತ ಹಾಕುವುದಿಲ್ಲ ಎಂದು ಪರಿಶಿಷ್ಟ…

39 mins ago

ಮಳೆ, ಗಾಳಿ ಆರ್ಭಟಕ್ಕೆ ಧರೆಗುರುಳಿದ ಏಸು ಕ್ರೈಸ್ತನ ಮೂರ್ತಿ

ಬೀಸಿದ ಗಾಳಿಗೆ ಸುರಿದ ಮಳೆಯ ರಭಸಕ್ಕೆ ಏಸು ಕ್ರೈಸ್ತನ ಮೂರ್ತಿ ಧರೆಗುರುಳಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮರಿ…

46 mins ago

ಶರೀರದ ದಾಹ, ಬಾಯಾರಿಕೆ ನಿವಾರಣೆಗಾಗಿ ಚಿಂಚಾ ಪಾನಕ ಬಳಸಿ: ಡಾ.ಶುಭ ರಾಜೇಶ್

ಬೇಸಿಗೆ ಕಾಲದಲ್ಲಿ ಸಾರ್ವಜನಿಕರು ತಮ್ಮ ಆರೋಗ್ಯ ಸುಧಾರಣೆಗೆ ಹೆಚ್ಚಿನ ಒತ್ತು ನೀಡಬೇಕು. ಜೀರ್ಣಕ್ರಿಯೆ ಉತ್ತಮಗೊಳಿಸಲು ಶರೀರದ ದಾಹ ನಿವಾರಣೆಗಾಗಿ ಆರೋಗ್ಯಕರ…

1 hour ago