Ad

ಬ್ರಿಟನ್ ಸಾರ್ವತ್ರಿಕ ಚುನಾವಣೆ; ಸೋಲೊಪ್ಪಿಕೊಂಡ ರಿಷಿ ಸುನಕ್

Rishi

ಬ್ರಿಟನ್​ನ ಸಾರ್ವತ್ರಿಕ ಚುನಾವಣೆಯಲ್ಲಿ ಹಾಲಿ ಪ್ರಧಾನಿ ರಿಷಿ ಸುನಕ್ ಸೋಲೊಪ್ಪಿಕೊಂಡಿದ್ದಾರೆ. ವಿರೋಧ ಪಕ್ಷ ಲೇಬರ್ ಪಾರ್ಟಿ 300ಕ್ಕೂ ಅಧಿಕ ಸ್ಥಾನ ಗಳಿಸಿದ್ದರೆ ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಕ್ಷ 61 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

Ad
300x250 2

ಭಾರತ ಮೂಲದ ಬ್ರಿಟನ್ ಪ್ರಧಾನಿ ರಿಷಿ ಸುನಕ್​ಗೆ ಹೀನಾಯ ಸೋಲಾಗುವ ಸಾಧ್ಯತೆ ಇದೆ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿವೆ.

ಬ್ರಿಟನ್ ಪ್ರಧಾನಿಯಾಗಲು ಸಜ್ಜಾಗಿರುವ ಲೇಬರ್ ಪಕ್ಷದ ಸ್ಟಾರ್ಮರ್, ಈ ಚುನಾವಣೆಯಲ್ಲಿ ಲೇಬರ್ ಪಕ್ಷಕ್ಕಾಗಿ ಪ್ರಚಾರ ಮಾಡಿದ ಪ್ರತಿಯೊಬ್ಬರಿಗೂ ನಮಗೆ ಮತ ಚಲಾಯಿಸಿದ ಮತ್ತು ನಮ್ಮ ಪಕ್ಷದ ಬಗ್ಗೆ ನಂಬಿಕೆ ಇಟ್ಟ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.

ಕೀರ್ ಸ್ಟಾರ್ಮರ್ ಬ್ರಿಟನ್‌ನ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ಎಕ್ಸಿಟ್ ಪೋಲ್‌ನಲ್ಲಿ ಬಹಿರಂಗವಾಗಿತ್ತು. ಅವರ ಲೇಬರ್ ಪಕ್ಷವು ಸಂಸತ್ತಿನ ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಗೆಲ್ಲುತ್ತದೆ ಎಂದು ಹೇಳಲಾಗಿತ್ತು. 650 ಸ್ಥಾನಗಳ ಸಂಸತ್ತಿನಲ್ಲಿ ಲೇಬರ್ ಪಕ್ಷ 410 ಸ್ಥಾನಗಳನ್ನು ಗೆಲ್ಲಲಿದೆ ಎಂದು ಎಕ್ಸಿಟ್ ಪೋಲ್‌ಗಳು ತೋರಿಸಿದ್ದು, ಈ ಕಾರಣದಿಂದಾಗಿ 14 ವರ್ಷಗಳ ಕನ್ಸರ್ವೇಟಿವ್ ನೇತೃತ್ವದ ಸರ್ಕಾರ ಈ ಬಾರಿ ಪತನವಾಗಲಿದೆ.

Ad
Ad
Nk Channel Final 21 09 2023
Ad