ವಾಷಿಂಗ್ಟನ್: ಅಮೆರಿಕದಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಆರ್‌ಎಸ್‌ಎಸ್ ಭಾರತವನ್ನು ಒಂದು ಕಲ್ಪನೆ ಎಂದು ನಂಬುತ್ತದೆ, ಭಾರತದಲ್ಲಿ ನಿರುದ್ಯೋಗದ ಬಗ್ಗೆಯೂ ರಾಹುಲ್ ಗಾಂಧಿ ಮಾತನಾಡಿದ್ದಾರೆ ಮತ್ತು ಚೀನಾದೊಂದಿಗೆ ಭಾರತವನ್ನು ಹೋಲಿಕೆ ಮಾಡಿದ್ದಾರೆ.
ಅಮೆರಿಕದ ಡಲ್ಲಾಸ್‌ನಲ್ಲಿ ಸಾರ್ವಜನಿಕ ಭಾಷಣದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಹರಿಹಾಯ್ದಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೆಕ್ಸಾಸ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳು ಮತ್ತು ಭಾರತೀಯ ವಲಸಿಗರ ಸದಸ್ಯರನ್ನು ಉದ್ದೇಶಿಸಿ ಮಾಡಿದ ಸಂವಾದದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಅಥವಾ ಆರ್‌ಎಸ್‌ಎಸ್ ಮಹಿಳೆಯರು ನಿರ್ದಿಷ್ಟ ವಲಯಕ್ಕೆ ಮಾತ್ರಕ್ಕೆ ಸೀಮಿತವಾಗಿರಬೇಕು, ಅವರು ಮನೆಯಲ್ಲಿಯೇ ಇರಬೇಕು, ಅಡುಗೆ ಮಾಡಬೇಕು, ಅವರು ಹೆಚ್ಚು ಮಾತನಾಡಬಾರದು ಎಂದು ನಂಬುತ್ತಾರೆ. ಮಹಿಳೆಯರು ಏನು ಮಾಡಲು ಬಯಸುತ್ತಾರೆಯೋ ಅದನ್ನು ಮಾಡಲು ಅವರಿಗೆ ಅವಕಾಶ ನೀಡಬೇಕು ಎಂದು ನಾವು ನಂಬುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಭಾರತವು ಒಂದು ಕಲ್ಪನೆ ಎಂದು ಆರ್‌ಎಸ್‌ಎಸ್ ನಂಬುತ್ತದೆ. ಭಾರತವು ಅನೇಕ ವಿಚಾರಗಳೆಂದು ನಾವು ನಂಬುತ್ತೇವೆ. ಪ್ರತಿಯೊಬ್ಬರಿಗೂ ಭಾಗವಹಿಸಲು ಅವಕಾಶ ನೀಡಬೇಕು, ಕನಸು ಕಾಣಲು ಅವಕಾಶ ನೀಡಬೇಕು ಮತ್ತು ಅವರ ಜಾತಿ, ಭಾಷೆ, ಧರ್ಮ, ಸಂಪ್ರದಾಯ ಅಥವಾ ಇತಿಹಾಸವನ್ನು ಲೆಕ್ಕಿಸದೆ ಜಾಗವನ್ನು ನೀಡಬೇಕು ಎಂದು ನಾವು ನಂಬುತ್ತೇವೆ.
ಲೋಕಸಭೆ ಚುನಾವಣೆ ಫಲಿತಾಂಶದಿಂದ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಭಯವು ಜನರಲ್ಲಿ ಮರೆಯಾಗಿದೆ ಎಂದು ಅವರು ಹೇಳಿದ್ದಾರೆ. ಚುನಾವಣಾ ಫಲಿತಾಂಶದ ಕೆಲವೇ ನಿಮಿಷಗಳಲ್ಲಿ ಭಾರತದಲ್ಲಿ ಯಾರೂ ಬಿಜೆಪಿ ಅಥವಾ ಭಾರತದ ಪ್ರಧಾನ ಮಂತ್ರಿಗೆ ಹೆದರುವುದಿಲ್ಲ ಎಂದು ನಾವು ನೋಡಿದ್ದೇವೆ ಎಂದರು.