Bengaluru 26°C
Ad

ರಷ್ಯಾ: ನದಿಯಲ್ಲಿ ಮುಳುಗಿ ನಾಲ್ವರು ಭಾರತೀಯ ಮೂಲದ ವಿದ್ಯಾರ್ಥಿಗಳು ಸಾವು

ನದಿಯಲ್ಲಿ ಮುಳುಗಿ ನಾಲ್ವರು ಭಾರತೀಯ ಮೂಲದ ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ರಷ್ಯಾದಲ್ಲಿ ನಡೆದಿದ್ದು, ಓರ್ವ ವಿದ್ಯಾರ್ಥಿಯನ್ನು ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮಾಸ್ಕೋ: ನದಿಯಲ್ಲಿ ಮುಳುಗಿ ನಾಲ್ವರು ಭಾರತೀಯ ಮೂಲದ ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ರಷ್ಯಾದಲ್ಲಿ ನಡೆದಿದ್ದು, ಓರ್ವ ವಿದ್ಯಾರ್ಥಿಯನ್ನು ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಮತ್ತು ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ಇವರ ವಯಸ್ಸು ಅಂದಾಜು 18-20 ವರ್ಷ.

ಇವರು ವೆಲಿಕಿ ನೊವ್ಗೊರೊಡ್ ನಗರದ ಸಮೀಪದಲ್ಲಿರುವ ನೊವ್ಗೊರೊಡ್ ಸ್ಟೇಟ್ ಯೂನಿವರ್ಸಿಟಿ ಯಲ್ಲಿ ಅಧ್ಯಯನ ಮಾಡುತ್ತಿದ್ದರುʼʼ ಎಂದು ಮೂಲಗಳು ವರದಿ ಮಾಡಿವೆ.

ಸೈಂಟ್‌ ಪೀಟರ್ಸ್‌ಬರ್ಗ್‌  ಬಳಿ ನದಿಯಲ್ಲಿ ಈ ಅವಘಡ ಸಂಭವಿಸಿದೆ ಎಂದು ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಶುಕ್ರವಾರ ದೃಢಪಡಿಸಿದೆ. ಶವಗಳನ್ನು ಆದಷ್ಟು ಬೇಗ ಭಾರತಕ್ಕೆ ಕಳುಹಿಸಲು ರಷ್ಯಾದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ತಿಳಿಸಿದೆ.

ವೋಲ್ಖೋವ್ ನದಿಗೆ ಬಿದ್ದ ವಿದ್ಯಾರ್ಥಿನಿಯನ್ನು ರಕ್ಷಿಸಲು ಆಕೆಯ ನಾಲ್ವರು ಸ್ನೇಹಿತರು ಯತ್ನಿಸಿದ ವೇಳೆ ಈ ದುರಂತ ನಡೆದಿದೆ. ಈ ಪೈಕಿ ಓರ್ವನನ್ನು ಸ್ಥಳೀಯರು ರಕ್ಷಿಸಿದ್ದಾರೆ. ಸದ್ಯ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಷ್ಯಾದ ಮಾಧ್ಯಮಗಳು ಹೇಳಿವೆ.

Ad
Ad
Nk Channel Final 21 09 2023
Ad