ಅಬುಜಾ : ಆಫ್ರಿಕಾದ ನೈಜೀರಿಯಾದಲ್ಲಿ ಶುಕ್ರವಾರ ಭೀಕರ ಅಪಘಾತ ಸಂಭವಿಸಿದ್ದು ಸೇಂಟ್ಸ್ ಅಕಾಡೆಮಿ ಕಾಲೇಜಿನ ಎರಡು ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಪರಿಣಾಮ 22 ಮಕ್ಕಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಇನ್ನು ಉಳಿದ ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಆರಂಭದಲ್ಲಿ ಒಟ್ಟು 154 ವಿದ್ಯಾರ್ಥಿಗಳು ಅವಶೇಷಗಳಲ್ಲಿ ಸಿಲುಕಿಕೊಂಡಿದ್ದು, ಅವರಲ್ಲಿ 132 ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ. ದುರದೃಷ್ಟವಶಾತ್​​ 22 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ವಕ್ತಾರ ಆಲ್ಫ್ರೆಡ್ ಅಲಾಬೊ ಹೇಳಿದ್ದಾರೆ.

ಈ ಶಾಲೆಯನ್ನು ನದಿಯ ದಡದಲ್ಲಿ ನಿರ್ಮಿಸಲಾಗಿರುವುದೇ ಈ ಅಪಘಾತಕ್ಕೆ ಕಾರಣ ಎಂದು ರಾಜ್ಯ ಸರ್ಕಾರ ಆರೋಪಿಸಿದೆ. ಅಲ್ಲದೆ, ಮುನ್ನೆಚ್ಚರಿಕೆ ವಹಿಸಿ, ದುರ್ಬಲ ಕಟ್ಟಡಗಳನ್ನು ಹೊಂದಿರುವ ಮತ್ತು ನದಿ ದಡದಲ್ಲಿರುವ ರಾಜ್ಯದ ಎಲ್ಲಾ ಶಾಲಾ ಕಟ್ಟಡಗಳನ್ನು ಕೂಡಲೇ ಮುಚ್ಚುವಂತೆ ಸರ್ಕಾರ ಮನವಿ ಮಾಡಿದೆ.