Bengaluru 22°C
Ad

ಲೈಂಗಿಕ ದೌರ್ಜನ್ಯ : ಕೋಕಕೋಲಾ ಉತ್ತರಾಧಿಕಾರಿಗೆ 7,200 ಕೋಟಿ ರೂ.ದಂಡ!

ಕೋಕ-ಕೋಲಾ ಕಂಪನಿಯ ಉತ್ತರಾಧಿಕಾರಿ ಅಲ್ಕಿ ಡೇವಿಡ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಸಾಬೀತಾಗಿದ್ದು, ಮಾಜಿ ಉದ್ಯೋಗಿಗೆ 900 ಮಿಲಿಯನ್ ಡಾಲರ್ (7,200 ಕೋಟಿ ರೂ.) ಪಾವತಿಸಲು ಲಾಸ್ ಏಂಜಲೀಸ್ ನ್ಯಾಯ ಮಂಡಳಿ ತೀರ್ಪು ನೀಡಿದೆ.

ಲಾಸ್ ಏಂಜಲೀಸ್: ಕೋಕ-ಕೋಲಾ ಕಂಪನಿಯ ಉತ್ತರಾಧಿಕಾರಿ ಅಲ್ಕಿ ಡೇವಿಡ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಸಾಬೀತಾಗಿದ್ದು, ಮಾಜಿ ಉದ್ಯೋಗಿಗೆ 900 ಮಿಲಿಯನ್ ಡಾಲರ್ (7,200 ಕೋಟಿ ರೂ.) ಪಾವತಿಸಲು ಲಾಸ್ ಏಂಜಲೀಸ್ ನ್ಯಾಯ ಮಂಡಳಿ ತೀರ್ಪು ನೀಡಿದೆ.

ಇದು ಇತಿಹಾಸದಲ್ಲಿ ಲೈಂಗಿಕ ಹಾನಿಗಾಗಿ ವಿಧಿಸಲಾದ ಇದುವರೆಗಿನ ಅತಿದೊಡ್ಡ ಪರಿಹಾರ ಮೊತ್ತವಾಗಿದೆ ಎನ್ನಲಾಗಿದೆ. ವಕೀಲರ ಪ್ರಕಾರ 2016- 2019ರ ನಡುವೆ ಮೂರು ವರ್ಷಗಳ ಕಾಲ ಜೇನ್ ಡೋ ಎಂಬ ಮಹಿಳೆ ಅಲ್ಕಿ ಡೇವಿಡ್ ಅವರಿಂದ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳಕ್ಕೆ ಒಳಗಾಗಿದ್ದರು. ಮಾಜಿ ನಿರ್ಮಾಣ ಸಹಾಯಕ ಮಹಿಮ್ ಖಾನ್ 2019ರಲ್ಲಿ ಡೇವಿಡ್ ವಿರುದ್ಧ ದೂರು ನೀಡಿದ್ದು, ಬಳಿಕ ಡೇವಿಡ್‌ಗೆ ಎಚ್ಚರಿಕೆಯನ್ನು ನೀಡಲಾಗಿತ್ತು.

ಲೈಂಗಿಕ ದುರ್ವರ್ತನೆಯನ್ನು ಒಳಗೊಂಡ ಹಲವಾರು ಇತರ ಪ್ರಕರಣಗಳಲ್ಲಿ ಡೇವಿಡ್ ತಪ್ಪಿತಸ್ಥರೆಂದು ಕಂಡುಬಂದಿದೆ. ಕಂಪನಿಗಳು ಇವರ ವಿರುದ್ಧ ಸುಮಾರು 70 ಮಿಲಿಯನ್ ಡಾಲರ್‌ನಷ್ಟು ಮೊತ್ತದ ಹಾನಿಯನ್ನು ಪಾವತಿಸಲು ಒತ್ತಾಯಿಸಿವೆ.

Ad
Ad
Nk Channel Final 21 09 2023
Ad