Ad

ಲಾಸ್ ವೇಗಾಸ್‌ನಲ್ಲಿ ಅಪಾರ್ಟ್‌ ಮೆಂಟ್‌ಗಳ ಮೇಲೆ ಗುಂಡಿನ ದಾಳಿ: ಐವರು ಮೃತ್ಯು

ಲಾಸ್ ವೇಗಾಸ್‌ನಲ್ಲಿರುವ ಅಪಾರ್ಟ್‌ ಮೆಂಟ್‌ಗಳ ಮೇಲೆ ನಡೆದ ಗುಂಡಿನ ದಾಳಿಯಿಂದಾಗಿ ಐವರು ಸಾವನ್ನಪ್ಪಿದ್ದು, 13 ವರ್ಷದ ಬಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ನ್ಯೂಯಾರ್ಕ್:‌ ಲಾಸ್ ವೇಗಾಸ್‌ನಲ್ಲಿರುವ ಅಪಾರ್ಟ್‌ ಮೆಂಟ್‌ಗಳ ಮೇಲೆ ನಡೆದ ಗುಂಡಿನ ದಾಳಿಯಿಂದಾಗಿ ಐವರು ಸಾವನ್ನಪ್ಪಿದ್ದು, 13 ವರ್ಷದ ಬಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

Ad
300x250 2

ಗುಂಡಿನ ದಾಳಿ ನಡೆಸಿದ ಶಂಕಿತನನ್ನು ಎರಿಕ್ ಆಡಮ್ಸ್ (47) ಎಂದು ಗುರುತಿಸಲಾಗಿದೆ. ಘಟನೆಯ ಬಳಿಕ ಈತನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಎರಿಕ್ ಆಡಮ್ಸ್ ಸೋಮವಾರ ತಡರಾತ್ರಿ ಅದೇ ಸಂಕೀರ್ಣದಲ್ಲಿರುವ ಎರಡು ನಾರ್ತ್ ಲಾಸ್ ವೇಗಾಸ್ ಅಪಾರ್ಟ್‌ಮೆಂಟ್‌ಗಳಲ್ಲಿ ನಾಲ್ವರು ಮಹಿಳೆಯರು ಮತ್ತು ಓರ್ವ ಪುರುಷನನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂದು ಶಂಕಿಸಲಾಗಿದೆ.

ಶಂಕಿತ ನ ಸುಳಿವಿನ ಮೇರೆಗೆ ಪೊಲೀಸರು ಆತನನ್ನು ಬಂಧಿಸಲು ತೆರಳಿದಾಗ ಆತ ಸ್ಥಳದಿಂದ ಪರಾರಿಯಾಗಿದ್ದಾನೆ. ಬಳಿಕ ಶೂಟೌಟ್‌ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯ ಹಿಂದಿರುವ ಉದ್ದೇಶ ಏನು ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Ad
Ad
Nk Channel Final 21 09 2023
Ad