ಇಸ್ರೇಲ್: ದಕ್ಷಿಣ ಇಸ್ರೇಲ್‌ನ ಬೀರ್ ಶೆವಾದಲ್ಲಿ ಮತ್ತೆ ಗುಂಡಿನ ದಾಳಿ ನಡೆದಿದ್ದು, ಈ ದಾಳಿಯಲ್ಲಿ ಒಬ್ಬರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಇಸ್ರೇಲ್ ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ದಾಳಿಯಲ್ಲಿ 25 ವರ್ಷದ ವೈದ್ಯೆ ಸಾವನ್ನಪ್ಪಿದ್ದಾರೆ. ಘಟನೆಯನ್ನು ಶಂಕಿತ ಭಯೋತ್ಪಾದಕ ದಾಳಿ ಎಂದು ಪರಿಗಣಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಹಲವಾರು ಗಾಯಗೊಂಡಿದ್ದಾರೆ. ದಾಳಿಯನ್ನ ತಡೆಯಲಾಗಿದ್ದು ಪಡೆಗಳು ಘಟನಾ ಸ್ಥಳದಲ್ಲಿ ಬೀಡುಬಿಟ್ಟಿವೆ.

