Ad

ಭಾರತೀಯ ಸೇನಾನೆಲೆ ಮೇಲಿನ ದಾಳಿಯ ಮಾಸ್ಟರ್‌ ಮೈಂಡ್‌ ಪಾಕ್ ಸೇನಾಧಿಕಾರಿ ಹತ್ಯೆ

Ameer Hamza

ಇಸ್ಲಾಮಾಬಾದ್‌: ಪಾಕಿಸ್ತಾನ ಸೇನೆಯ ನಿವೃತ್ತ ಬ್ರಿಗೇಡಿಯರ್, ಆರು ವರ್ಷಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ನಡೆದ ಉಗ್ರರ ದಾಳಿಯ ಸಂಚುಕೋರ ಎನ್ನಲಾದ ಅಮೀರ್ ಹಮ್ಜಾನನ್ನು ಪಾಕಿಸ್ತಾನದ ಪಂಜಾಬ್‌ನ ಝೀಲಂ ಪ್ರದೇಶದ ಲಿಲ್ಲಾ ಇಂಟರ್‌ಜಾರ್ಜ್‌ನಲ್ಲಿ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಗಳು ತಿಳಿಸಿವೆ.

Ad
300x250 2

ಬ್ರಿಗೇಡಿಯರ್ ಹಮ್ಜಾ ಕಾರಿನಲ್ಲಿ ತನ್ನ ಪತ್ನಿ ಮತ್ತು ಮಗಳೊಂದಿಗೆ ಪ್ರಯಾಣಿಸುತ್ತಿದ್ದಾಗ ಈ ದಾಳಿ ನಡೆದಿದೆ. ಪತ್ನಿ ಮತ್ತು ಮಗಳು ಗಾಯಗೊಂಡಿದ್ದಾರೆ. ದಾಳಿಕೋರರು ಯಾವುದೇ ಬೇಡಿಕೆಯಿಲ್ಲದೆ ಏಕಾಏಕಿ ಗುಂಡು ಹಾರಿಸಿದರು. ಇದು ಉದ್ದೇಶಪೂರ್ವಕವಾಗಿ ನಡೆದ ದಾಳಿ ಎಂದು ವರದಿ ಹೇಳಿದೆ. ಸದ್ಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಈ ಕೊಲೆ ಪ್ರಕರಣದ ತನಿಖೆ ಆರಂಭಿಸಿದ್ದೇವೆ. ಎಫ್‌ಐಆರ್‌ ದಾಖಲಿಸಲಾಗಿದೆ. ಇದು ಭಯೋತ್ಪಾದಕರ ದಾಳಿ ಎನ್ನುವುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವರದಿಗಳ ಪ್ರಕಾರ, ತುರ್ತು ಸೇವೆಗಳ ಅಕಾಡೆಮಿ 1122ರ ಮಾಜಿ ಡಿಜಿ ಬ್ರಿಗೇಡಿಯರ್ ಅಮೀರ್ ಹಮ್ಜಾ 2018ರಲ್ಲಿ ಜಮ್ಮು ಮತ್ತು ಕಾಶ್ಮೀರದ ಸುಂಜ್ವಾನ್ ಸೇನಾ ಶಿಬಿರದ ಮೇಲೆ ನಡೆದ ಶಂಕಿತ ಜೈಶ್-ಎ-ಮೊಹಮ್ಮದ್ (ಜೆಎಂ) ಭಯೋತ್ಪಾದಕ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬ ಎನ್ನಲಾಗಿದೆ. 2018ರ ಫೆಬ್ರವರಿ 10ರಂದು ನಡೆದ ದಾಳಿಯಲ್ಲಿ ಇಬ್ಬರು ಜೂನಿಯರ್ ಕಮಿಷನ್ಡ್ ಅಧಿಕಾರಿಗಳು (ಜೆಸಿಒ) ಮತ್ತು ಸೈನಿಕನ ತಂದೆ ಸೇರಿದಂತೆ ಐವರು ಭಾರತೀಯ ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದರು. ಈ ದಾಳಿಯಲ್ಲಿ ಆರು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹತ್ತು ಜನರು ಗಾಯಗೊಂಡಿದ್ದರು. ಈ ದಾಳಿಯಲ್ಲಿ ಭಾಗಿಯಾಗಿದ್ದಕ್ಕಾಗಿ ಈಗ ಪ್ರತಿಕಾರ ತೀರಿಸಿಕೊಳ್ಳಲಾಗಿದೆ ಎಂದು ಅಂದಾಜಿಸಲಾಗಿದೆ.

 

 

Ad
Ad
Nk Channel Final 21 09 2023
Ad