ಇಸ್ಲಾಮಾಬಾದ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಬಸ್ ಪಲ್ಟಿಯಾದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, 50 ಮಂದಿ ಗಾಯಗೊಂಡಿದ್ದಾರೆ.
ಶೇಖ್ಪುರದಲ್ಲಿ ಶನಿವಾರ ರಾತ್ರಿ ಕ್ರಿಶ್ಚಿಯನ್ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ತಿರುವು ತೆಗೆದುಕೊಳ್ಳುವಾಗ ಈ ಅಪಘಾತ ಸಂಭವಿಸಿದೆ ಎಂದು ಎಆರ್ವೈ ಸುದ್ದಿ ವರದಿ ಮಾಡಿದೆ.
ರಕ್ಷಣಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಬಸ್ ಚಾಲಕ ಹಾಗೂ ಕಂಡಕ್ಟರ್ ವಿರುದ್ಧ ಪ್ರಕರಣ ದಾಖಲಾಗಿದೆ.