Bengaluru 24°C
Ad

ಪಾಕಿಸ್ತಾನಕ್ಕೆ ಮೊದಲ ಬಾರಿ ಭೇಟಿ ನೀಡುತ್ತಿರುವ ಎಸ್​​.ಜೈ ಶಂಕರ್​

ಭಾರತ ಮತ್ತು ಪಾಕ್​ ನಡುವಿನ ಸಂಬಂಧ ಹದಗೆಟ್ಟಿರುವಾಗಲೇ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಪಾಕಿಸ್ತಾನಕ್ಕೆ ತೆರಳುತ್ತಿದ್ದಾರೆನ್ನುವ ಸುದ್ದಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಭಾರತ ಮತ್ತು ಪಾಕ್​ ನಡುವಿನ ಸಂಬಂಧ ಹದಗೆಟ್ಟಿರುವಾಗಲೇ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಪಾಕಿಸ್ತಾನಕ್ಕೆ ತೆರಳುತ್ತಿದ್ದಾರೆನ್ನುವ ಸುದ್ದಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

9 ವರ್ಷಗಳ ಬಳಿಕ ಪಾಕಿಸ್ತಾನಕ್ಕೆ ಭಾರತದ ವಿದೇಶಾಂಗ ಸಚಿವರು ಪ್ರಯಾಣಿಸುತ್ತಿದ್ದಾರೆ. ಇದೇ ಅಕ್ಟೋಬರ್ 15 ಮತ್ತು 16 ರಂದು ಪಾಕಿಸ್ತಾನದ ಇಸ್ಲಾಮಾಬಾದ್‌ಗೆ ಜೈ ಶಂಕರ್ ಪ್ರಯಾಣ ಬೆಳೆಸಲಿದ್ದಾರಂತೆ.

ಇಸ್ಲಾಮಾಬಾದ್‌ನಲ್ಲಿ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆ ನಡೆಯಲಿದ್ದು, ಇದರಲ್ಲಿ ಜೈ ಶಂಕರ್ ಭಾಗಿಯಾಗಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದ್ದಾರೆ. ಈ ವೇಳೆ SCO ಸದಸ್ಯ ರಾಷ್ಟ್ರಗಳ ನಡುವೆ ಹಣಕಾಸು, ಆರ್ಥಿಕ, ಸಾಮಾಜಿಕ-ಸಾಂಸ್ಕೃತಿಕ ಮತ್ತು ಮಾನವೀಯ ಸಹಕಾರ ಸಂಬಂಧ ಸಭೆಗಳು ನಡೆಯಲಿವೆ ಎನ್ನಲಾಗಿದೆ.

Ad
Ad
Nk Channel Final 21 09 2023