ಸೌದಿ ಅರೇಬಿಯಾ : ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ಸ್ಥಳಗಳಲ್ಲಿ ಒಂದಾದ ಮದೀನಾದ ಪ್ರವಾದಿ ಮಸೀದಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ತಂದೆಯನ್ನು ಅಲ್ಲಿಯೇ ಕೊಂದರೆ ಅವರು ನೇರವಾಗಿ ಸ್ವರ್ಗಕ್ಕೆ ಹೋಗುತ್ತಾರೆ ಎಂಬ ವಿತಂಡವಾದದೊಂದಿಗೆ ಮಗನೊಬ್ಬ ತಂದೆಯ ಗಂಟಲು ಹಿಸುಕಿ ಕೊಲ್ಲಲು ಯತ್ನಿಸಿದ್ದಾನೆ.
ತಕ್ಷಣ ಕಾರ್ಯಪ್ರವೃತ್ತರಾದ ಸೌದಿ ಭದ್ರತಾ ಸಿಬ್ಬಂದಿ ವೃದ್ಧನನ್ನು ರಕ್ಷಿಸಿ, ಮಗನನ್ನು ಸ್ಥಳದಲ್ಲೇ ಬಂಧಿಸಿದ್ದಾರೆ.

