ಪಾಕಿಸ್ತಾನ: ವಜೀರಿಸ್ತಾನದಲ್ಲಿ ಪಾಕಿಸ್ತಾನ ಸೇನೆ ಮೇಲೆ ಉಗ್ರರ ದಾಳಿ ನಡೆದಿದೆ. ಇದರಲ್ಲಿ ಪಾಕಿಸ್ತಾನದ 6 ಪಾಕ್ ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ಈ ಭಯೋತ್ಪಾದಕ ದಾಳಿಯ ಹೊಣೆಯನ್ನು ತೆಹ್ರೀಕ್-ಎ-ತಾಲಿಬಾನ್ (ಟಿಟಿಪಿ) ಹೊತ್ತುಕೊಂಡಿದೆ.
ಪಾಕಿಸ್ತಾನದ ಮಾಧ್ಯಮ ವರದಿಯ ಪ್ರಕಾರ, ಟಿಟಿಪಿ ಯೋಧರು ಮೇಲಿನ ದಕ್ಷಿಣ ವಜಿರಿಸ್ತಾನದ ಲಾಧಾ ಬಳಿ ಪಾಕಿಸ್ತಾನದ ಸೇನಾ ಪೋಸ್ಟ್ ಮೇಲೆ ಕ್ರೂರ ದಾಳಿ ನಡೆಸಿದರು. ಆರು ಯೋಧರು ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ 4 ಜನರ ಸ್ಥಿತಿ ಚಿಂತಾಜನಕವಾಗಿದೆ. ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ ದಾಳಿಯ ಹೊಣೆ ಹೊತ್ತುಕೊಂಡಿದೆ.
Ad