ಅಮೆರಿಕ: ನೀಲಿ ಚಿತ್ರಗಳ ತಾರೆ ಥೈನಾ ಫೀಲ್ಡ್ಸ್ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಪೇರುವಿನಲ್ಲಿರುವ ಅವರ ನಿವಾಸದಲ್ಲಿ ಮೃತದೇಹ ಪತ್ತೆಯಾಗಿದೆ.
ಕಳೆದ ಒಂದು ತಿಂಗಳ ಹಿಂದಷ್ಟೇ ಅಶ್ಲೀಲ ಚಿತ್ರಗಳ ನಿಂದನೆಗೆ ಒಳಗಾಗಿರುವ ಬಗ್ಗೆ ಗಂಭೀರ ಆರೋಪ ಮಾಡಿದ್ದರು.
ಅಡಲ್ಟ್ ಕಂಟೆಂಟ್ ಕ್ರಿಯೇಟರ್ ಒಬ್ಬರು, ಥೈನಾ ಮೃತಪಟ್ಟಿರುವ ಬಗ್ಗೆ ಖಚಿತಪಡಿಸಿದ್ದಾರೆ. ಅಲ್ಜೇಂದ್ರ ಸ್ವೀಟ್ ಅವರು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಬೇಸರದ ಸುದ್ದಿಯನ್ನು ಶೇರ್ ಮಾಡಿದ್ದರು. ಥೈನಾ ಫೀಲ್ಡ್ಸ್ ಅವರ ಪಾಸಿಟೀವ್ ವಿಚಾರಗಳನ್ನು ನೆನಪಿಟ್ಟುಕೊಳ್ಳಿ, ಜೊತೆಗೆ ಆಕೆಗಾಗಿ ಪ್ರಾರ್ಥಿಸುವಂತೆ ಮನವಿ ಮಾಡಿದ್ದಾರೆ.