Categories: ವಿದೇಶ

ಗುರುದ್ವಾರದ ಮೇಲೆ ಭಯೋತ್ಪಾದಕ ದಾಳಿ : ಇಬ್ಬರ ಸಾವು, ಏಳುಜನರಿಗೆ ತೀವ್ರ ಗಾಯ

ಅಪ್ಘಾನಿಸ್ತಾನ:  ಕಾಬೂಲ್‌ ನ ಬಾಗ್-ಎ ಬಾಲಾ ಬಳಿಯಿರುವ ಕಾರ್ಟೆ ಪರ್ವಾನ್ ಗುರುದ್ವಾರದ ಮೇಲೆ ಶನಿವಾರ  ಉಗ್ರರು ದಾಳಿ ನಡೆಸಿದ್ದಾರೆ. ಗುರುದ್ವಾರದ ಹಲವೆಡೆ ಸ್ಫೋಟ ಸಂಭವಿಸಿದ್ದು ಗುಂಡಿನ ದಾಳಿಯೂ ನಡೆದಿದೆ. ಘಟನೆಯಲ್ಲಿ ಒಬ್ಬ ಸಿಖ್‌ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಫೋಟ ಸಂಭವಿಸಿದ ಬೆನ್ನಲ್ಲೇ ಸ್ಫೋಟಕಗಳನ್ನು ತುಂಬಿಕೊಂಡ ಇನ್ನೊಂದು ವಾಹನ ಗುರುದ್ವಾರದ ಬಳಿ ಸಾಗುತ್ತಿತ್ತು. ಆದರೆ ಅಪ್ಘನ್‌ ರಕ್ಷಣಾ ಪಡೆಗಳು ಅದನ್ನು ಮಾರ್ಗಮಧ್ಯದಲ್ಲೇ ತಡೆದು ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ. ಭಯೋತ್ಪಾದಕರು ಮತ್ತು ತಾಲಿಬಾನ್ ಹೋರಾಟಗಾರರ ನಡುವೆ ಗುಂಡಿನ ಚಕಮಕಿ ಹಲವಾರು ಗಂಟೆಗಳ ಕಾಲ ನಡೆಯಿತು ಎಂದು ಆಂತರಿಕ ಸಚಿವಾಲಯದ ವಕ್ತಾರ ಅಬ್ದುಲ್ ನಫಿ ಟಾಕೋರ್ ಹೇಳಿದ್ದಾರೆ.

ಸಿಖ್ ಸಮುದಾಯದ ಪವಿತ್ರ ಗ್ರಂಥವಾದ ಗುರು ಗ್ರಂಥ ಸಾಹಿಬ್ ಅನ್ನು ಗುರುದ್ವಾರ ಕಾರ್ಟೆ ಪರ್ವಾನ್‌ನಿಂದ ಸುರಕ್ಷಿತವಾಗಿ ಹೊರತರಲಾಗಿದೆ. ಮೂಲಗಳ ಪ್ರಕಾರ, ಪುಸ್ತಕವನ್ನು ಉಳಿಸಲು ಬೆಂಕಿ ಹೊತ್ತಿಕೊಂಡಿದ್ದ ಗುರುದ್ವಾರ ಆವರಣವನ್ನು ಆಫ್ಘನ್ ಸಿಖ್ಖರು ಪ್ರವೇಶಿಸಿ ಪವಿತ್ರ ಗ್ರಂಥವನ್ನು ಹೊರತರುವಲ್ಲಿ ಯಶಸ್ವಿಯಾಗಿದ್ದಾರೆ.

ಭಾರತವು ಈ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದು ಸಿಖ್ಖರ ಪರವಾಗಿ ನಿಂತಿದೆ. “ಗುರುದ್ವಾರ ಕರ್ತೆ ಪರ್ವಾನ್ ಮೇಲಿನ ಹೇಡಿತನದ ದಾಳಿಯನ್ನು ಎಲ್ಲರೂ ತೀವ್ರವಾಗಿ ಖಂಡಿಸಬೇಕು. ದಾಳಿಯ ಸುದ್ದಿ ಬಂದ ನಂತರ ನಾವು ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ನಮ್ಮ ಮೊದಲ ಮತ್ತು ಅಗ್ರಗಣ್ಯ ಕಾಳಜಿ ಸಮುದಾಯದ ಕಲ್ಯಾಣವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್‌ ಹೇಳಿದ್ದಾರೆ.

ಕಾಬೂಲ್‌ನ ಗುರುದ್ವಾರದ ಮೇಲಿನ ದಾಳಿಯ ನಂತರ 100 ಕ್ಕೂ ಹೆಚ್ಚು ಅಫ್ಘಾನ್ ಸಿಖ್ಖರು ಮತ್ತು ಹಿಂದೂಗಳಿಗೆ ಭಾರತವು ಆದ್ಯತೆಯ ಆಧಾರದ ಮೇಲೆ ಇ-ವಿಸಾವನ್ನು ನೀಡಿದೆ ಎನ್ನಲಾಗಿದೆ.

Sneha Gowda

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

26 seconds ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

22 mins ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

45 mins ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

1 hour ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

1 hour ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

1 hour ago