News Karnataka Kannada
Wednesday, May 08 2024
ವಿದೇಶ

ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಬೆಂಕಿ: ಅಮೆರಿಕ ಖಂಡನೆ

us condemns vandalism attempted
Photo Credit : Twitter

ನ್ಯೂಯಾರ್ಕ್: ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ಭಾರತೀಯ ರಾಯಭಾರ ಕಚೇರಿ ಮೇಲಿನ ವಿಧ್ವಂಸಕ ಕೃತ್ಯ ಮತ್ತು ಬೆಂಕಿ ಹಚ್ಚುವ ಯತ್ನವನ್ನು ಅಮೆರಿಕ ಬಲವಾಗಿ ಖಂಡಿಸಿದ್ದು, ಈ ಹಿಂಸಾಚಾರವನ್ನು ‘ಕ್ರಿಮಿನಲ್ ಅಪರಾಧ’ ಎಂದು ಹೇಳಿದೆ.

ಈ ಕುರಿತು ಟ್ವೀಟ್ ಮಾಡಿರುವ ಸ್ಟೇಟ್ ಡಿಪಾರ್ಟ್‌ಮೆಂಟ್ ವಕ್ತಾರ ಮ್ಯಾಥ್ಯೂ ಮಿಲ್ಲರ್, ಭಾರತೀಯ ದೂತವಾಸ ಕಚೇರಿ ಮೇಲಿನ ವಿಧ್ವಂಸಕ ಕೃತ್ಯವನ್ನು ಅಮೆರಿಕ ಬಲವಾಗಿ ಖಂಡಿಸುತ್ತದೆ. ಅಮೆರಿಕದಲ್ಲಿ ವಿದೇಶಿ ರಾಜತಾಂತ್ರಿಕರು ಹಾಗೂ ರಾಯಭಾರದ ವಿರುದ್ಧದ ವಿಧ್ವಂಸಕ ಕೃತ್ಯವು ಕ್ರಿಮಿನಲ್ ಅಪರಾಧವಾಗಿದೆ ಎಂದು ಹೇಳಿದ್ದಾರೆ.

ದಕ್ಷಿಣ ಏಷ್ಯಾದ ಟಿ.ವಿ ನೆಟ್‌ವರ್ಕ್ ದಿಯಾ ಟಿ.ವಿ ಪ್ರಕಾರ, ಭಾನುವಾರ ಮುಂಜಾನೆ ಖಾಲಿಸ್ತಾನ ಪರ ಪ್ರತಿಭಟನಕಾರರು ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ತಕ್ಷಣವೇ ಸ್ಯಾನ್ ಫ್ರಾನ್ಸಿಸ್ಕೊ ಡಿಪಾರ್ಟ್‌ಮೆಂಟ್ ಬೆಂಕಿಯನ್ನು ನಂದಿಸಿದೆ. ಯಾವುದೇ ಸಿಬ್ಬಂದಿಗೆ ಗಾಯಗಳಾಗಿಲ್ಲ ಎಂದು ತಿಳಿಸಿದೆ. ಜುಲೈ 02ರಂದು ಸ್ಯಾನ್‌ ಫ್ರಾನ್ಸಿಸ್ಕೊದಲ್ಲಿ ಭಾರತೀಯ ರಾಯಭಾರ ಕಚೇರಿಗೆ ಬೆಂಕಿ ಹಚ್ಚುವ ಯತ್ನ ಸಂಬಂಧಿಸಿದಂತೆ ವಿಡಿಯೊವನ್ನು ಖಾಲಿಸ್ತಾನ ಬೆಂಬಲಿಗರು ಹಂಚಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು