News Karnataka Kannada
Saturday, April 13 2024
Cricket
ವಿದೇಶ

ಬಂದೂಕುಧಾರಿ ಗಳಿಂದ ಗುಂಡಿನ ದಾಳಿ ಐವರ ಸಾವು

Untitled 145
Photo Credit :

ಅಫ್ಘಾನಿಸ್ತಾನ : ಸಮಂಗನ್ ಪ್ರಾಂತ್ಯದಲ್ಲಿ ಅಪರಿಚಿತ ಬಂದೂಕುಧಾರಿಗಳು ನಡೆಸಿದ ದಾಳಿಯಲ್ಲಿ ಕಲ್ಲಿದ್ದಲು ಗಣಿಯಲ್ಲಿ ಕೆಲಸ ಮಾಡುತ್ತಿದ್ದ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪ್ರಾಂತ್ಯದ ಸ್ಥಳೀಯ ಅಧಿಕಾರಿಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ಬಾಲ್ಖ ಪ್ರಾಂತ್ಯದ ಗಡಿಯಲ್ಲಿರುವ ಪ್ರಾಂತ್ಯದ ದಾರಾ-ಎ-ಸೋಫ್ ಜಿಲ್ಲೆಯ ಕೋಟಾಲ್ ರೆಗಿ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಘಟನೆ ನಡೆದಿದ್ದು, ಗಣಿಗಾರರನ್ನು ದರೋಡೆ ಮಾಡಿ ಬಳಿಕ ದಾಳಿಕೋರರು ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ ಎಂದು ಸ್ಥಳೀಯ ತಾಲಿಬಾನ್ ಅಧಿಕಾರಿಗಳು ತಿಳಿಸಿದ್ದಾರೆ.

ಕೊಲೆಯಾದವರೆಲ್ಲ ಜಿಲ್ಲೆಯ ಮೂಲ ನಿವಾಸಿಗಳಾಗಿದ್ದು, ಹಜಾರಾ ಗುಂಪಿಗೆ ಸೇರಿದವರಾಗಿದ್ದಾರೆ. ಇದುವರೆಗೂ ಘಟನೆಯ ಹೊಣೆಯನ್ನು ಯಾವುದೇ ಗುಂಪು ಹೊತ್ತುಕೊಂಡಿಲ್ಲ ಎಂದು ತಿಳಿದು ಬಂದಿದೆ.

ಇತ್ತೀಚಿನ ದಿನಗಳಲ್ಲಿ ನಡೆದ ದಾಳಿಗಳ ಸರಣಿಯ ವಿರುದ್ಧ ವಿಶ್ವಸಂಸ್ಥೆ, ಮಾಜಿ ಅಫ್ಘಾನ್ ರಾಜಕಾರಣಿಗಳು ಮತ್ತು ಮಾನವ ಹಕ್ಕುಗಳ ಗುಂಪುಗಳು ಸೇರಿದಂತೆ ವಿಶ್ವಾದ್ಯಂತ ಖಂಡನೆ ವ್ಯಕ್ತಪಡಿಸಿದ್ದು, ದಾಳಿಗಳನ್ನು ‘ಮಾನವೀಯತೆಯ ವಿರುದ್ಧದ ಅಪರಾಧಗಳು’ ಎಂದು ಖಂಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು