ಬೀಜಿಂಗ್ : ಕೊರೊನಾ ನಿಯಂತ್ರಣ ನಿಟ್ಟಿನಲ್ಲಿ ಕಳೆದ 2 ವರ್ಷಗಳ ಕಾಲ ವೀಸಾ ರದ್ದುಗೊಳಿಸಿದ್ದ ಚೀನಾ, ಇದೀಗ ಶ್ರೀಲಂಕಾದ ವಿದ್ಯಾರ್ಥಿಗಳನ್ನು ಅಧ್ಯಯನಕ್ಕಾಗಿ ವಾಪಸ್ ಕರೆಸಿಕೊಳ್ಳುವುದಾಗಿ ಚೀನಾ ಸರ್ಕಾರ ಹೇಳಿದೆ. ಆದರೆ ಭಾರತದ ವಿದ್ಯಾರ್ಥಿಗಳ ಬಗ್ಗೆ ಚೀನಾ ಸರ್ಕಾರ ಮೌನ ವಹಿಸಿದೆ, ಯಾವುದೇ ಮಾಹಿತಿ ನೀಡಿಲ್ಲ.
ಭಾರತದ ಒಟ್ಟಾರೆ 23,000 ವಿದ್ಯಾರ್ಥಿಗಳು ಚೀನಾದಲ್ಲಿ ಅಧ್ಯಯನ ಮಾಡುತ್ತಿದ್ದರು. ಆದರೆ ಶ್ರೀಲಂಕಾದ ಎಷ್ಟು ವಿದ್ಯಾರ್ಥಿಗಳನ್ನು ಕರೆಸಿಕೊಳ್ಳಲಾಗುತ್ತದೆ ಎಂಬ ಬಗ್ಗೆ ಚೀನಾ ಸರ್ಕಾರ ಸ್ಪಷ್ಟ ಮಾಹಿತಿ ನೀಡಿಲ್ಲ.
2019ರಲ್ಲಿ ಚೀನಾದ ವುಹಾನ್ನ ನಗರದಲ್ಲಿ ಕೋವಿಡ್ ವ್ಯಾಪಿಸಿದ ಬಳಿಕ ಸೋಂಕು ನಿಯಂತ್ರಣಕ್ಕಾಗಿ ಹೇರಲಾಗಿದ್ದ ಪ್ರಯಾಣದ ನಿರ್ಬಂಧದಿಂದಾಗಿ ಚೀನಾದ ವಿಶ್ವ ವಿದ್ಯಾಲಯಗಳಲ್ಲಿ ಓದುತ್ತಿದ್ದ ಭಾರತ ಸೇರಿದಂತೆ ವಿಶ್ವದ ನಾನಾ ದೇಶಗಳ ವಿದ್ಯಾರ್ಥಿಗಳು ಚೀನಾಕ್ಕೆ ಹಿಂದಿರುಗಲು ಸಾಧ್ಯವಾಗದೇ ತಮ್ಮ ದೇಶಗಳಲ್ಲೇ ಉಳಿದುಕೊಂಡಿದ್ದಾರೆ.