News Karnataka Kannada
Thursday, May 02 2024
ವಿದೇಶ

ಅಪ್ಘಾನಿಸ್ತಾನ:ಹಿಮದ ಮಳೆ – ತುರ್ತು ಪರಿಸ್ಥಿತಿ ಘೋಷಣೆ

Breaking News
Photo Credit :

ಕಾಬೂಲ್ : ಅಪ್ಘಾನಿಸ್ತಾನದ ಬಹುತೇಕ ಪ್ರದೇಶಗಳಲ್ಲಿ ಹಿಮ ಹಾಗೂ ಮಳೆಯ ಪ್ರಮಾಣ ಹೆಚ್ಚಾಗಿದ್ದು, ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಅಲ್ಲಿನ ಜನರು ಪ್ರಕೃತಿ ವಿಕೋಪಕ್ಕೆ ತುತ್ತಾಗಿದ್ದಾರೆ.

ವಿಪತ್ತು ನಿರ್ವಹಣಾ ಸಚಿವಾಲಯದ ಅಧಿಕಾರಿ ಫ್ರೀ ಆಫ್ ಅಪ್ಘಾನಿಸ್ತಾನ್ ರೇಡಿಯೊಂದಿಗೆ ಮಾತನಾಡಿದ್ದು, ಪ್ರತಿಕೂಲ ಹವಾಮಾನ ಎದುರಿಸಲು ಸಿದ್ಧರಾಗುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅಲ್ಲದೇ, ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಅಗತ್ಯ ದಿನಬಳಕೆಯ ವಸ್ತುಗಳನ್ನು ಸಾಗಿಸಲಾಗುತ್ತಿದೆ. ಪ್ರತಿಕೂಲ ವಾತಾವರಣವಿರುವ ಜನರಿಗೆ ಧೈರ್ಯ ತುಂಬಬೇಕು. ಅವರಿಗೆ ಅಗತ್ಯ ವಸ್ತುಗಳು ಸಿಗುವಂತೆ ಮಾಡಬೇಕು ಎಂದು ಸೂಚಿಸಿದ್ದಾರೆ ಎಂದು ಅಲ್ಲಿನ ಖಾಮಾ ಪ್ರೆಸ್ ವರದಿ ಮಾಡಿದೆ.

ಸದ್ಯ ಅಲ್ಲಿನ 32 ಪ್ರಾಂತ್ಯಗಳಲ್ಲಿ ಭಾರೀ ಹಿಮದ ಮಳೆಯಾಗುತ್ತಿದೆ. ಈ ನಿಟ್ಟಿನಲ್ಲಿ ರಸ್ತೆಗಳು ಸಂಪೂರ್ಣವಾಗಿ ಮುಚ್ಚಿ ಹೋಗಿವೆ. ಅಲ್ಲದೇ, ಈ ಪ್ರದೇಶಗಳಲ್ಲಿ ಪ್ರವಾಹ ಕೂಡ ಸೃಷ್ಟಿಯಾಗುತ್ತಿದೆ. ಈಗಾಗಲೇ ಹಿಮದ ಮಳೆಗೆ ಸಿಲುಕಿ 26 ಜನ ಗಾಯಗೊಂಡು, 7 ಜನ ಸಾವನ್ನಪ್ಪಿದ್ದಾರೆ. ಕಳೆದ ಒಂದು ವಾರದಿಂದ ಅಲ್ಲಿ ಹಿಮದ ಮಳೆ ಸುರಿಯುತ್ತಿದೆ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು