Categories: ವಿದೇಶ

ಅಫ್ಘಾನಿಸ್ತಾನದ ಮೂರು ನಗರಗಳು ತಾಲಿಬಾನ್ ವಶಕ್ಕೆ

ಕಾಬೂಲ್ : ಅಫ್ಘಾನಿಸ್ತಾನದ  ಕುಂದುಜ್, ಸರ್ ಇ ಪುಲ್ ಮತ್ತು ತಲುಕನ್ ನಗರಗಳನ್ನು ತಾಲಿಬಾನ್ ತನ್ನ ವಶಕ್ಕೆ ಪಡೆದುಕೊಂಡಿದೆ. ಅಮೆರಿಕ ಮತ್ತು ನ್ಯಾಟೊ ಪಡೆಗಳು ಅಫ್ಘಾನಿಸ್ತಾನದಿಂದ ಕಾಲ್ತೆಗೆದ ಬೆನ್ನಲ್ಲೇ ಪರಿಸ್ಥಿತಿ ಲಾಭ ಪಡೆದುಕೊಳ್ಳಲು ಮುಂದಾಗಿರುವ ತಾಲಿಬಾನ್ ಮತ್ತೆ ಅಫ್ಘಾನಿಸ್ತಾನವನ್ನು ತನ್ನ ವಶಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ  ಆಫ್ಘನ್ ಸೇನಾಪಡೆಗಳ ಮೇಲೆ ಯುದ್ಧ ಸಾರಿದ್ದವು.
ಕಳೆದ ಕೆಲ ತಿಂಗಳುಗಳಲ್ಲಿ ದೇಶದಲ್ಲಿ ಸ್ಫೋಟ, ಹಿಂಸಾಚಾರ, ವಿದ್ಯಾಸಂಸ್ಥೆಗಳ ಮೇಲೆ ದಾಳಿ ಪ್ರಕರಣಗಳು ಹೆಚ್ಚಿದ್ದವು. ಹಿಂಸಾಚಾರದ ಹಿಂದೆ ತಾಲಿಬಾನ್ ಕೈವಾಡ ಇದೆಯೆಂದು ಸರ್ಕಾರ ಆರೋಪಿಸಿತ್ತು. ಸರ್ಕಾರ ಮತ್ತು ತಾಲಿಬಾನ್ ನಾಯಕರ ನಡುವಿನ ಶಾಂತಿ ಮಾತುಕತೆ ಸಮಯದಲ್ಲಿ, ಅಮೆರಿಕ ಸೈನಿಕರು ದೇಶದಿಂದ ಕಾಲುಕಿತ್ತರೆ ಮಾತ್ರ ಶಾಂತಿ ನೆಲೆಸಲು ಅನುವು ಮಾಡಿಕೊಡುವುದಾಗಿ ತಾಲಿಬಾನ್ ನಾಯಕರು ಹೇಳಿದ್ದರು. ಅದರಂತೆ ಅಮೆರಿಕ ಅಫ್ಘಾನಿಸ್ತಾನದಿಂದ ತನ್ನ ಸೈನಿಕರನ್ನು ಹಿಂದಕ್ಕೆ ಕರೆಸಿಕೊಳ್ಳಲು ಸಮ್ಮತಿ ಸೂಚಿಸಿತ್ತು.
ಇದರಿಂದಾಗಿ ದೇಶದಲ್ಲಿ ಮತ್ತೆ ತಾಲಿಬಾನ್ ಆಡಳಿತ ಶುರುವಾಗಿ, ಜನಸಾಮಾನ್ಯರು ಅಪಾಯಕ್ಕೆ ಸಿಲುಕುವ ಆತಂಕವನ್ನು ಅಂತಾರಾಷ್ಟ್ರೀಯ  ಸಮುದಾಯ ವ್ಯಕ್ತಪಡಿಸಿತ್ತು. ಅದೀಗ ನಿಜವಾಗುತ್ತಿದೆ ಎಂದು ರಾಜಕೀಯ ಪರಿಣತರು ಆತಂಕ ವ್ಯಕ್ತಪಡಿಸಿದ್ದಾರೆ. ತಾಲಿಬಾನ್ ಶೇ.60 ಪ್ರತಿಶತ ದೇಶವನ್ನು ವಶಪಡಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಈ ಮಧ್ಯೆ ತಾಲಿಬಾನ್ ಮೂರು ಪ್ರಮುಖ ನಗರಗಳನ್ನು ವಶಪಡಿಸಿಕೊಂಡಿರುವುದು ತಾಲಿಬಾನ್ ಮೇಲುಗೈ ಸಾಧಿಸಿರುವುದರ ಪ್ರತೀಕ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಹಿಂದೆ ಸಾವಿರಾರು ಆಫ್ಘನ್ ಸೇನಾಪಡೆಯ ಸೈನಿಕರು ತಾಲಿಬಾನ್ ಬಂಡುಕೋರರ ನಡುವಿನ ಕಾದಾಟದಲ್ಲಿ ಹಿಮ್ಮೆಟ್ಟಿ ಪಾಕ್ ಗಡಿ ಪ್ರದೇಶದೊಳಕ್ಕೆ ನುಗ್ಗಿ ಅಲ್ಲಿನ ಆಶ್ರಯ ಪಡೆದುಕೊಂಡಿತ್ತು ಎನ್ನುವುದು ಗಮನಾರ್ಹ. ಇತ್ತೀಚಿಗಷ್ಟೆ ಕಂದಹಾರ್‌ನಲ್ಲಿ ಆಫ್ಘನ್ ಭದ್ರತಾಪಡೆಗಳು ಮತ್ತು ತಾಲಿಬಾನ್ ನಡುವಿನ ಸಂಘರ್ಷದ ವರದಿಗಾರಿಕೆಗೆಂದು ತೆರಳಿದ್ದ ಭಾರತೀಯ ಮೂಲದ ಪತ್ರಕರ್ತ ದಾನಿಶ್ ಸಿದ್ದಿಕಿ ತಾಲಿಬಾನಿಗಳ ಗುಂಡಿಗೆ ಬಲಿಯಾಗಿದ್ದು ಎನ್ನುವುದು ಉಲ್ಲೇಖನೀಯ.
Raksha Deshpande

Recent Posts

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

9 mins ago

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

26 mins ago

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

50 mins ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

1 hour ago

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

1 hour ago

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

2 hours ago