ಅಮೆರಿಕದಲ್ಲಿ ಒಂದೇ ದಿನ ದಾಖಲೆಯ 5.8 ಲಕ್ಷ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಮಕ್ಕಳನ್ನು ಅತಿ ಹೆಚ್ಚಾಗಿ ಬಾಧಿಸುತ್ತಿದೆ ಎಂದು ವರದಿ ಹೇಳಿದೆ.
ಅಮೆರಿಕದಲ್ಲಿ ಒಮಿಕ್ರಾನ್ ಅಬ್ಬರ ಹೆಚ್ಚಾಗಲಿದೆ ಎಂದು ತಜ್ಞರು ಮುನ್ಸೂಚನೆ ನೀಡಿದ ಬೆನ್ನಲ್ಲೇ ದಾಖಲೆ ಸಂಖ್ಯೆಯ ಸೋಂಕು ಪ್ರಕರಣಗಳು ಪತ್ತೆಯಾಗುತ್ತಿವೆ. ವಿಷಾದ ಏನೆಂದರೆ ಬಹುತೇಕ ಯುವ ಸಮುದಾಯ ಲಸಿಕೆ ಪಡೆಯದೇ ಇರುವುದು.
ಶೇ.378ರಷ್ಟು 17 ವರ್ಷದೊಳಗಿನ ಮಕ್ಕಳಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಅತೀ ಹೆಚ್ಚಾಗಿ ಮಕ್ಕಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಆಸ್ಪತ್ರೆಗೆ ದಾಖಲಿಸುತ್ತಿರುವ ಮಕ್ಕಳ ಸಂಖ್ಯೆ ದಿಢೀರನೆ ಹೆಚ್ಚಾಗಿದೆ.