Categories: ವಿದೇಶ

ಅಮೆರಿಕದಲ್ಲಿ ಒಮೈಕ್ರಾನ್: ಆಸ್ಪತ್ರೆಗೆ ದಾಖಲಾಗುವ ಮಕ್ಕಳ ಸಂಖ್ಯೆ ಪಟ್ಟು ನಾಲ್ಕು ಹೆಚ್ಚಳ

ವಾಷಿಂಗ್ಟನ್: ಅಮೆರಿಕದಲ್ಲಿ ಒಮೈಕ್ರಾನ್ ಪ್ರಕರಣಗಳ ಸಂಖ್ಯೆ ಕ್ಷಿಪ್ರವಾಗಿ ಹೆಚ್ಚುತ್ತಿರುವ ನಡುವೆಯೇ ಆಸ್ಪತ್ರೆಗೆ ದಾಖಲಾಗುತ್ತಿರುವ ಮಕ್ಕಳ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ ಎಂದು ನ್ಯೂಯಾರ್ಕ್ ಆರೋಗ್ಯ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.”ನ್ಯೂಯಾರ್ಕ್ ನಗರದಲ್ಲಿ ಡಿಸೆಂಬರ್ 5ಕ್ಕೆ ಹೋಲಿಸಿದರೆ ಪ್ರಸಕ್ತ ವಾರದಲ್ಲಿ ಕೋವಿಡ್-19 ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ 18 ವರ್ಷಕ್ಕಿಂತ ಕೆಳವಯಸ್ಸಿನವರ ಸಂಖ್ಯೆ ನಾಲ್ಕು ಪಟ್ಟು ಹೆಚ್ಚಳವಾಗಿದೆ” ಎಂದು ಹೇಳಿದ್ದಾರೆ.

ಈ ಪೈಕಿ ಅರ್ಧದಷ್ಟು ಮಂದಿ ಐದು ವರ್ಷಕ್ಕಿಂತ ಕೆಳಗಿನವರು. ಈ ವರ್ಗದ ಮಕ್ಕಳು ಲಸಿಕೆ ಪಡೆಯಲು ಇನ್ನೂ ಅರ್ಹರಾಗಿಲ್ಲ. ಅಮೆರಿಕದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿದ್ದು, ಕಳೆದ ಏಳು ದಿನಗಳಿಂದ ಸರಾಸರಿ ದೈನಿಕ ಹೊಸ ಸೋಂಕು ಪ್ರಕರಣಗಳ ಸಂಖ್ಯೆ 1,90,000 ಇದೆ ಎಂದು ಜಾನ್ ಹಾಕಿನ್ಸ್ ವಿವಿಯ ಅಂಕಿ ಅಂಶಗಳಿಂದ ತಿಳಿದು ಬರುತ್ತದೆ.

ಹೊಸದಾಗಿ ಒಮೈಕ್ರಾನ್ ಪ್ರಬೇಧದ ಸೋಂಕು ಕಾಣಿಸಿಕೊಂಡಿರುವುದು ಮತ್ತು ಹಬ್ಬದ ಸಂಭ್ರಮದಲ್ಲಿ ಕುಟುಂಬಗಳ ಮಿಲನ, ಪ್ರವಾಸದ ಕಾರಣದಿಂದ ಕೋವಿಡ್ ಪತ್ತೆ ಪರೀಕ್ಷೆಗೆ ಜನ ಮುಗಿ ಬಿದ್ದಿದ್ದಾರೆ.

ಪರೀಕ್ಷಾ ಸಮಸ್ಯೆ ಇದೆ ಎಂದು ಅಮೆರಿಕದ ಸಾಂಕ್ರಾಮಿಕಗಳ ಸಲಹೆಗಾರ ಆಂಟೋನಿ ಫೌಸಿ ಒಪ್ಪಿಕೊಂಡಿದ್ದಾರೆ. ಮುಂದಿನ ತಿಂಗಳ ವೇಳೆಗೆ ಪರೀಕ್ಷೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

Swathi MG

Recent Posts

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

16 mins ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

30 mins ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

43 mins ago

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

1 hour ago

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

1 hour ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

2 hours ago