News Karnataka Kannada
Sunday, April 28 2024
ವಿದೇಶ

ಅಮೆರಿಕದಲ್ಲಿ ಓಮಿಕ್ರೋನ್ ಮೊದಲ ಪ್ರಕರಣ ಸೋಂಕು ಪತ್ತೆ

Omicron Virus
Photo Credit :

ಕ್ಯಾಲಿಫೋರ್ನಿಯಾ:  ಇತ್ತೀಚೆಗೆ ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ ಪ್ರಯಾಣಿಕನಲ್ಲಿ ಓಮೈಕ್ರಾನ್‌ನ ಸೋಂಕು ಇರುವುದು ದೃಢಪಟ್ಟಿದೆ ಎಂದು ಅಮೆರಿಕ ಘೋಷಿಸಿದೆ. ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿ ಓಮೈಕ್ರಾನ್‌ನ ಮೊದಲ ಪ್ರಕರಣವು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಬುಧವಾರ ಪತ್ತೆಯಾಗಿದೆ.

ಓಮೈಕ್ರಾನ್‌ ಸೋಂಕು ಪತ್ತೆಯಾಗಿರುವ ವ್ಯಕ್ತಿಯು ಎರಡು ಡೋಸ್‌ ಕೋವಿಡ್‌ ಲಸಿಕೆ ಪಡೆದಿದ್ದು, ಯಾವುದೇ ಬೂಸ್ಟರ್‌ ಡೋಸ್‌ ಸ್ವೀಕರಿಸಿಲ್ಲ ಎಂದು ಅಲ್ಲಿನ ಆರೋಗ್ಯ ಇಲಾಖೆ ತಿಳಿಸಿದೆ.

ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿಗೆ (ಬಿ.1.1.529) ‘ಓಮೈಕ್ರಾನ್‌’ ಎಂಬ ಹೆಸರಿಡಲಾಗಿದೆ. ಇದು ಜಗತ್ತಿನಾದ್ಯಂತ ಭಾರಿ ಕಳವಳ ಮೂಡಿಸಿದ್ದು, ಅತ್ಯಂತ ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದೆ.

ಓಮೈಕ್ರಾನ್‌ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಅಮೆರಿಕಕ್ಕೆ ಬರುವ ಪ್ರಯಾಣಕರ ಮೇಲೆ ಕಠಿಣ ನಿರ್ಬಂಧ ಹೇರಲು ಅಲ್ಲಿನ ಸರ್ಕಾರ ಮುಂದಾಗಿದೆ.

ದಕ್ಷಿಣ ಆಫ್ರಿಕಾ, ಬೋಟ್ಸ್‌ವಾನಾ, ಜಿಂಬಾಬ್ವೆ, ನಮೀಬಿಯಾ ಮತ್ತು ಲೆಸೊಟೊ ದೇಶದಲ್ಲಿ ಈ ತಳಿಯ ವೈರಾಣು ತಗುಲಿರುವ ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಆಫ್ರಿಕಾದಲ್ಲಿ ಈ ತಿಂಗಳ ಆರಂಭದಿಂದ ಕೋವಿಡ್‌ ಹೊಸ ಪ್ರಕರಣಗಳ ಸಂಖ್ಯೆ ವಿಪರೀತ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಏರಿಕೆಗೆ ಓಮೈಕ್ರಾನ್‌ ತಳಿಯೇ ಕಾರಣವಾಗಿರಬಹುದು. ದಕ್ಷಿಣ ಆಫ್ರಿಕಾದ ನೆರೆಯ ದೇಶಗಳಿಗೂ ಈ ರೂಪಾಂತರ ತಳಿಯು ಹರಡಿರಬಹದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಆಫ್ರಿಕಾ ಘಟಕವು ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು