Categories: ವಿದೇಶ

ಅಮೆರಿಕದಲ್ಲಿ ಮಕ್ಕಳಿಗೆ ಕೋವಿಡ್ ಸೋಂಕು: ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚು

ಅಮೆರಿಕದಲ್ಲಿ ಒಮಿಕ್ರಾನ್ ಭೀತಿ ನಡುವೆ ಕೋವಿಡ್ ಸೋಂಕಿತರ ಸಂಖ್ಯೆ ಕೂಡ ಹೆಚ್ಚಾಗುತ್ತಿದ್ದು, ಆಸ್ಪತ್ರೆಗೆ ದಾಖಲಾಗುತ್ತಿರುವ 5ವರ್ಷದೊಳಗಿನ ಮಕ್ಕಳ ಸಂಖ್ಯೆ ಏರಿಕೆಯಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ.

5 ವರ್ಷದೊಳಗಿನ ಮಕ್ಕಳು ಕೋವಿಡ್ ಲಸಿಕೆ ಪಡೆಯಲು ಅರ್ಹರಿಲ್ಲದ ಕಾರಣ ಸೋಂಕು ಹೆಚ್ಚಾಗುತ್ತಿದೆ ಎನ್ನಲಾಗಿದೆ. ಅಮೆರಿಕದಲ್ಲಿ ಡಿಸೆಂಬರ್ ನಿಂದ ಒಮಿಕ್ರಾನ್ ಸೋಂಕು ಹೆಚ್ಚಾಗುತ್ತಿದ್ದು, ಈ ವೇಳೆ ಲಕ್ಷ ಮಕ್ಕಳಲ್ಲಿ ಶೇ.2.5ರಷ್ಟು ಮಕ್ಕಳು ಕೋವಿಡ್ ಗೆ ತುತ್ತಾಗಿದ್ದಾರೆ.

ದೇಶದ 14 ರಾಜ್ಯಗಳಲ್ಲಿ 250 ಆಸ್ಪತ್ರೆಗಳಲ್ಲಿ  5-17 ವರ್ಷದ ಮಕ್ಕಳು ಚಿಕಿತ್ಸೆಗೆ ದಾಖಲಾಗಿದ್ದಾರೆ. ಮೊದಲೆರಡು ಕೋವಿಡ್ ಅಲೆಗಳಿಗಿಂತ ಪ್ರಸ್ತುತ ಸಾಲಿನಲ್ಲಿ ಹೆಚ್ಚಿನ ಮಕ್ಕಳು ಸೋಂಕಿಗೆ ಗುರಿಯಾಗುತ್ತಿದ್ದಾರೆ ಎಂದು ವರದಿ ತಿಳಿಸಿದೆ.
12-18 ವರ್ಷದ ಮಕ್ಕಳ ಪೈಕಿ ಕೇವಲ 50ರಷ್ಟು ಮಕ್ಕಳು ಮಾತ್ರ ಸಂಪೂರ್ಣ ಲಸಿಕೆ ಪಡೆದಿದ್ದಾರೆ.

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

12 mins ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

30 mins ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

50 mins ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

1 hour ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

2 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

2 hours ago