Categories: ವಿದೇಶ

ಅರಬ್ ಹಾಗೂ ಆಫ್ರಿಕನ್ ಮಸಲಿತ್ ಗಳ ಮುಂದುವರಿದ ಹಿಂಸಾಚಾರ

ಕೈರೋ : ಬುಡಕಟ್ಟು ಜನಾಂಗದವರ ಮಧ್ಯೆ ಕಳೆದ ಐದು ದಿನಗಳಿಂದ ನಡೆಯುತ್ತಿರುವ ಮಾರಾಮಾರಿಯಲ್ಲಿ ಬರೋಬ್ಬರಿ 175ಕ್ಕೂ ಹೆಚ್ಚು ಜನರ ಬಲಿಯಾಗಿದೆ. ಅರಬ್ಬರು ಮತ್ತು ಆಫ್ರಿಕನ್ ಮಸಲಿತ್ ಬುಡಕಟ್ಟುಗಳ ನಡುವೆ ಉಂಟಾದ ಹಿಂಸಾಚಾರ ಮುಂದುವರೆದಿದ್ದು, ನೂರಾರು ಜನರನ್ನು ಬಲಿ ಪಡೆದಿದೆ.

ಬುಡಕಟ್ಟು ಜನಾಂಗದ ಮಾರಾಮಾರಿ ತಡೆಯಲು ಸೂಡಾನ್ ಸರ್ಕಾರ ಪಶ್ಚಿಮ, ಧಾರ್‍ಪುರ್ ಪ್ರಾಂತ್ಯಕ್ಕೆ ಮತ್ತಷ್ಟು ಸೇನಾಪಡೆಗಳನ್ನು ನಿಯೋಜಿಸಿದೆ. ರಾಜಧಾನಿ ಜಿನೇನಾದಿಂದ 80ಕಿ.ಮೀ. ಪೂರ್ವಕ್ಕೆ ಕ್ರೆನಿನ್ ಪಟ್ಟಣದಲ್ಲಿ ಅರಬ್ಬರು ಮತ್ತು ಆಫ್ರಿಕನ್ ಮಸಲಿತ್ ಬುಡಕಟ್ಟು ಜನಾಂಗದ ನಡುವೆ ಮಾರಾಮಾರಿ ನಡೆದಿದ್ದು, ಈ ಘರ್ಷಣೆ ಜಿನೇನಾ ತಲುಪಿದೆ.

ಇಲ್ಲಿನ ಮುಖ್ಯ ಮಾರುಕಟ್ಟೆಯಲ್ಲಿ ಅಧಿಕಾರಿಗಳು ನಿನ್ನೆ ರಾತ್ರಿಯಿಂದ ಕಫ್ರ್ಯೂ ಘೋಷಿಸಿದ್ದಾರೆ. ಕ್ರೆನಿಕ್‍ನಲ್ಲಿ ಗುರುವಾರ ಇಬ್ಬರು ಅರಬ್ಬರನ್ನು ಅಪರಿಚಿತರು ಕೊಂದು ಹಾಕಿದ ನಂತರ ಹಿಂಸಾಚಾರ ಭುಗಿಲೆದ್ದಿತ್ತು. ಭಾನುವಾರ ಒಂದೇ ದಿನ ಹಿಂಸಾಚಾರದಿಂದ 168 ಜನರು ಸಾವನ್ನಪ್ಪಿದ್ದಾರೆ ಮತ್ತು 89 ಜನ ತೀವ್ರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ 17 ಮಕ್ಕಳು ಮತ್ತು 27 ಮಹಿಳೆಯರು ಸೇರಿದ್ದಾರೆ ಎಂದು ಕ್ರೆನಿಕ್ ಪುರಸಭೆ ನಿರ್ದೇಶಕ ನಾಸರ್ ಆಲ್ಜೆನ್ ಹೇಳಿದ್ದಾರೆ.

ಭಾನುವಾರ ನಡೆದ ಕೆಲ ಗಂಟೆಗಳ ಘರ್ಷಣೆಯಲ್ಲಿ ಸರ್ಕಾರಿ ಕಟ್ಟಡ, ಪೊಲೀಸ್ ಠಾಣೆ ಮತ್ತು ಕ್ರೆನಿಕ್‍ನಲ್ಲಿದ್ದ ಏಕೈಕ ಆಸ್ಪತ್ರೆಯನ್ನೂ ಗಲಭೆಕೋರರು ಸುಟ್ಟುಹಾಕಿದ್ದಾರೆ. ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದ ಜಿನೇನಾ ಆಸ್ಪತ್ರೆ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಓರ್ವ ಸಾವನ್ನಪ್ಪಿದ್ದಾನೆ. ಎರಡು ಜನಾಂಗಗಳ ನಡುವೆ ನಡೆದ ಈ ದಾಳಿಯನ್ನು ಹತ್ತಿಕ್ಕಲು ಸೇನಾಪಡೆಯನ್ನು ನಿಯೋಜಿಸಿ ಭದ್ರತೆ ಹೆಚ್ಚಿಸಲಾಗಿದೆ.

Ashika S

Recent Posts

ಹಣ್ಣಕ್ಕೆ ಬೇಡಿಕೆ ಇಟ್ಟು ಮರ್ಮಾಂಗಕ್ಕೆ ವಿದ್ಯುತ್​ ಶಾಕ್​ ನೀಡಿ ಚಿತ್ರಹಿಂಸೆ

ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…

19 mins ago

ಮಾಜಿ ಸಿಎಂ ಎಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ: ಕಾಂಗ್ರೆಸ್​ ಶಾಸಕ

ಹೆಚ್​ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…

31 mins ago

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ

ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…

50 mins ago

ಕ್ರಿಕೆಟ್ ಪಂದ್ಯದ ವೇಳೆ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ

ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…

51 mins ago

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

1 hour ago

ಕೈ ತಪ್ಪಿದ ವಿಧಾನಪರಿಷತ್ ಟಿಕೆಟ್: ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾ‌ನ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…

1 hour ago