Categories: ವಿದೇಶ

ಆಫ್ಘನ್:‌ ಮಿನಿ ಬಸ್‌ಗಳ ಮೇಲೆ ಬಾಂಬ್‌ ದಾಳಿ, 9ಸಾವು

ಆಫ್ಘಾನಿಸ್ತಾನದಲ್ಲಿ ಬಾಂಬ್‌ ದಾಳಿಗಳು ನಿಲ್ಲುತ್ತಿಲ್ಲ. ಒಂದು ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸುತ್ತಿದೆ. ಇದೀಗ ಗುರುವಾರ ಸಂಜೆ ಅಫ್ಘಾನಿಸ್ತಾನದ ಮಜರ್-ಎ-ಷರೀಫ್‌ನಲ್ಲಿ ಮಿನಿ ಬಸ್‌ಗಳ ಮೇಲೆ ಎರಡು ಬಾಂಬ್ ದಾಳಿ ನಡೆದಿದೆ.

ಇಸ್ಲಾಮಿಕ್ ಸ್ಟೇಟ್ ಬಾಂಬ್ ದಾಳಿಯ ಹೊಣೆ ಹೊತ್ತುಕೊಂಡಿದೆ. ಬೆಳಗ್ಗೆಯಿಂದ ಸಂಜೆವರೆಗೂ ಉಪವಾಸ ಇದ್ದು ಸಂಜೆ ʻರೋಜಾʼ ಸಮಯದಲ್ಲಿ ಮನೆಗೆ ಹಿಂದಿರುಗುವಾಗ ಬಾಂಬ್‌ ಸ್ಫೋಟ ನಡೆದಿದೆ. ಘಟನೆಯಿಲ್ಲಿ ಒಂಭತ್ತು ಮಂದಿ ಸಾವನ್ನಪ್ಪಿದ್ದು, 13 ಮಂದಿ ಗಂಭೀರವಾಗಿ ಗಾಯಗೊಂಡಿರುವುದಾಗಿ ಬಾಲ್ಖ್ ಪ್ರಾಂತೀಯ ಪೊಲೀಸ್ ವಕ್ತಾರ ಆಸಿಫ್ ವಜಿರಿ ತಿಳಿಸಿದ್ದಾರೆ.

ಘಟನೆಯಿಂದ ತಾಲಿಬಾನ್ ಪಡೆ ಅಲರ್ಟ್ ಆಗಿದ್ದಾರೆ. ಬಾಲ್ಖ್ ಪ್ರಾಂತ್ಯದ ರಾಜಧಾನಿ ಮಜರ್-ಇ-ಶರೀಫ್‌ನಲ್ಲಿ ಬಂದೂಕುಧಾರಿಗಳು ಎರಡು ಮಿನಿ ಬಸ್‌ಗಳನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ತಾಲಿಬಾನ್ ಅಧಿಕಾರಿಗಳು ಹೇಳಿದ್ದಾರೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ತಾಲಿಬಾನ್ ಅಧಿಕಾರಕ್ಕೆ ಬಂದಾಗಿನಿಂದ ಅಫ್ಘಾನಿಸ್ತಾನದಲ್ಲಿ ಹಿಂಸಾಚಾರ ನಡೆಯುತ್ತಲೇ ಇದೆ. ಕಳೆದ ವಾರ ಮಸೀದಿ ಮತ್ತು ಧಾರ್ಮಿಕ ಶಾಲೆಯ ಮೇಲೆ ನಡೆದ ಬಾಂಬ್ ದಾಳಿಯಲ್ಲಿ 33 ಮಂದಿ ಸಾವನ್ನಪ್ಪಿದ್ದರು. ದಾಳಿಗಳು ಶಿಯಾ ಪಂಗಡವನ್ನು ಗುರಿಯಾಗಿರಿಸಿಕೊಂಡಿವೆ ಎಂದು ಹೇಳಿದ್ದಾರೆ.

ಬಾಂಬ್ ದಾಳಿಗಳಿಗೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿದೆ ಎಂದು ಆಫ್ಘನ್ ಸರ್ಕಾರದ ವಕ್ತಾರ ಜಬಿಹುಲ್ಲಾ ಮುಜಾಹಿದ್ ಹೇಳಿದ್ದಾರೆ. ಮಸೀದಿ, ಶಾಲೆಗಳಂತಹ ಅಸುರಕ್ಷಿತ ಸ್ಥಳಗಳಲ್ಲಿ ದಾಳಿಗಳು ನಡೆಯುತ್ತಿವೆ, ಘಟನೆಗಳನ್ನು ಗಮನಿಸಿ ಇದೀಗ ನಾವು ಅಂತಹ ಸ್ಥಳಗಳಲ್ಲಿಯೂ ಭದ್ರತೆಯನ್ನು ನಿಯೋಜಿಸಿದ್ದೇವೆ ಎಂದಿದ್ದಾರೆ.

Sneha Gowda

Recent Posts

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

16 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

24 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

25 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

39 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

45 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

58 mins ago