Categories: ವಿದೇಶ

ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಾಗ ಪೊಲೀಸರನ್ನು ತಳ್ಳಿ ಪರಾರಿಯಾದ ಆರೋಪಿ

ಬೆಂಗಳೂರು: ನೇಪಾಳ ಮೂಲದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ರೌಡಿಶೀಟರ್‌ ಅವೇಜ್‌(22)ನನ್ನು ಬೌರಿಂಗ್‌ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಾಗ, ಪೊಲೀಸರನ್ನು ತಳ್ಳಿ ಪರಾರಿಯಾಗಿದ್ದಾನೆ.

ಈತನ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ಪೂರ್ವ ವಿಭಾಗ ಡಿಸಿಪಿ ಭೀಮಾಶಂಕರ್‌ ಗುಳೇದ್‌ ಹೇಳಿದರು. ರೌಡಿ ಅವೇಜ್‌ ವಿರುದ್ಧ ಕೊಲೆ, ಕೊಲೆ ಯತ್ನ, ಸುಲಿಗೆ, ಜೀವ ಬೆದರಿಕೆ ಸೇರಿದಂತೆ 27 ಪ್ರಕರಣಗಳು ದಾಖಲಾಗಿವೆ. ಕಮರ್ಷಿಯಲ್‌ ಸ್ಟ್ರೀಟ್‌ ಠಾಣೆಯ ರೌಡಿಶೀಟರ್‌ ಆಗಿದ್ದಾನೆ.

ಗುರುವಾರ ಮುಂಜಾನೆ ಡಿ.ಜೆ.ಹಳ್ಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ನೇಪಾಳ ಮೂಲದ ಮಹಿಳೆಯನ್ನು ಎಳೆ ದೊಯ್ದು ಅತ್ಯಾಚಾರ ಎಸಗಿದ್ದ.ಘಟನೆ ನಡೆದ ಕೆಲ ಗಂಟೆಗಳಲ್ಲೇ ಆರೋಪಿಯನ್ನು ಬಂಧಿಸಲಾಗಿತ್ತು. ನಂತರ ರಾತ್ರಿ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಾಗ, ಪೊಲೀಸರನ್ನು ತಳ್ಳಿ ಪರಾರಿಯಾಗಿದ್ದಾನೆ.

ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆಂದು ಸಿಬ್ಬಂದಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಪರೀಕ್ಷೆ ಮುಗಿಸಿ ಠಾಣೆಗೆ ವಾಪಸು ಕರೆದೊಯ್ಯಲು ಜೀಪು ಹತ್ತಿಸಲಾಗುತ್ತಿತ್ತು. ಅದೇ ವೇಳೆ ಪೊಲೀಸರನ್ನು ತಳ್ಳಿ ಓಡಿ ಹೋಗಿದ್ದಾನೆ. ಆತನನ್ನು ಬೆನ್ನಟ್ಟಿದರೂ ಸಿಕ್ಕಿಲ್ಲ ಎಂದು ಹೇಳಿದರು.

 

Swathi MG

Recent Posts

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

9 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

21 mins ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

39 mins ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

47 mins ago

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

1 hour ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

1 hour ago