Categories: ವಿದೇಶ

ಉಕ್ರೇನ್‌ ಮೇಲೆ ಯುದ್ಧ ಘೋಷಿಸಿದ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

ಮಾಸ್ಕೊ : ಪಾಶ್ಚಿಮಾತ್ಯ ದೇಶಗಳು ಮತ್ತು ವಿಶ್ವ ಸಮುದಾಯದ ಎಚ್ಚರಿಕೆಯನ್ನು ಧಿಕ್ಕರಿಸಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಉಕ್ರೇನ್‌ನಲ್ಲಿ ‘ಮಿಲಿಟರಿ ಕಾರ್ಯಾಚರಣೆ’ಘೋಷಿಸಿದ್ದಾರೆ. ತಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸುವಂತೆ ಉಕ್ರೇನ್ ಸೈನಿಕರಿಗೆ ಅವರು ಕರೆ ನೀಡಿದ್ದಾರೆ.

‘ನಾನು ಉಕ್ರೇನ್ ಮೇಲೆ ಮಿಲಿಟರಿ ಕಾರ್ಯಾಚರಣೆಯ ನಿರ್ಧಾರವನ್ನು ಮಾಡಿದ್ದೇನೆ’ ಎಂದು ಅವರು ದೂರದರ್ಶನದ ಮೂಲಕ ಘೊಷಣೆ ಮಾಡಿದ್ದಾರೆ. ಇದೇವೇಳೆ, ಕಾರ್ಯಾಚರಣೆಯ ಮಧ್ಯ ಪ್ರವೇಶಿಸುವವರ ವಿರುದ್ಧ ಪ್ರತೀಕಾರದ ಪ್ರತಿಜ್ಞೆ ಮಾಡಿದ್ದಾರೆ.

ಪೂರ್ವ ಉಕ್ರೇನ್‌ನಲ್ಲಿನ ಬಂಡಾಯ ನಾಯಕರು ಉಕ್ರೇನ್ ವಿರುದ್ಧ ಮಿಲಿಟರಿ ಸಹಾಯಕ್ಕಾಗಿ ರಷ್ಯಾದ ನೆರವು ಕೇಳಿದ್ದಾರೆ ಎಂದು ರಷ್ಯಾ ಅಧ್ಯಕ್ಷರ ಕಚೇರಿ ಹೇಳಿಕೆ ಬೆನ್ನಲ್ಲೇ ಪುಟಿನ್ ಈ ಆದೇಶ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ರಷ್ಯನ್ನರನ್ನು ಉದ್ದೇಶಿಸಿ ‘ಯುರೋಪ್‌ನಲ್ಲಿನ ಪ್ರಮುಖ ಯುದ್ಧ’ ವನ್ನು ಬೆಂಬಲಿಸದಂತೆ ತಡರಾತ್ರಿ ಭಾವನಾತ್ಮಕ ಮನವಿ ಮಾಡಿದ್ದರು.

ರಷ್ಯನ್ ಭಾಷೆಯಲ್ಲಿ ಮಾತನಾಡುತ್ತಾ, ಉಕ್ರೇನ್ ಬಗ್ಗೆ ರಷ್ಯಾದ ಜನರಿಗೆ ಸುಳ್ಳು ಹೇಳಲಾಗುತ್ತಿದೆ ಮತ್ತು ಯುದ್ಧದ ಸಾಧ್ಯತೆಯು ‘ನಿಮ್ಮ ಮೇಲೆ ಅವಲಂಬಿತವಾಗಿದೆ’ ಎಂದು ಝೆಲೆನ್ಸ್ಕಿ ಹೇಳಿದ್ದರು.

Gayathri SG

Recent Posts

ಇಂದಿನ ರಾಶಿ ಫಲ : ಯಾರಿಗೆ ಶುಭ , ಯಾರಿಗೆ ಅಶುಭ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 09 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ…

5 mins ago

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

8 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

8 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

8 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

8 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

9 hours ago