ಉತ್ತರ ಕೊರಿಯಾ: ಮೊದಲ ಬಾರಿಗೆ ಕೊರೋನಾ ರೂಪಾಂತರಿ ಒಮಿಕ್ರಾನ್ ದೃಢಪಟ್ಟಿದ್ದು, ಆರು ಮಂದಿ ಮೃತಪಟ್ಟಿದ್ದಾರೆ ಎಂದು ಸರ್ಕಾರಿ ಸುದ್ದಿಸಂಸ್ಥೆ ಕೆಸಿಎನ್ಎ ಶುಕ್ರವಾರ ವರದಿ ಮಾಡಿದೆ.
ಮೃತಪಟ್ಟಿರುವ ಆರು ಜನರ ಪೈಕಿ ಒಬ್ಬ ವ್ಯಕ್ತಿಗೆ ಕೋವಿಡ್ ದೃಢಪಟ್ಟಿತ್ತು. ಉಳಿದವರೂ ಜ್ವರದಿಂದ ಬಳಲುತ್ತಿದ್ದರು, ಆದರೆ ಇವರ ಪೈಕಿ ಎಷ್ಟು ಜನರಿಗೆ ಕೋವಿಡ್ ದೃಢಪಟ್ಟಿತ್ತು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ .
ದೇಶದಾದ್ಯಂತ ಜ್ವರ ದಿಢೀರ್ನೆ ವ್ಯಾಪಕವಾಗುತ್ತಿದ್ದು, ಈ ಸಂಬಂಧ 3.50 ಲಕ್ಷ ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೋವಿಡ್ ಪರೀಕ್ಷೆಗಳು ನಡೆಯುತ್ತಿಲ್ಲ. ಹೀಗಾಗಿ ಈಗ ದಿಢೀರ್ನೆ ವ್ಯಾಪಕವಾಗುತ್ತಿರುವ ಜ್ವರಕ್ಕೆ ಕಾರಣಗಳೇನು ಎಂಬುದು ತಿಳಿದು ಬಂದಿಲ್ಲ ಎಂದು ತಜ್ಞರು ಹೇಳಿದ್ದಾರೆ.
ಕೋವಿಡ್ನ ಮೊದಲ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಉತ್ತರ ಕೊರಿಯಾದಲ್ಲಿ ಗುರುವಾರ ರಾಷ್ಟ್ರವ್ಯಾಪಿ ಲಾಕ್ಡೌನ್ ಘೋಷಿಸಲಾಗಿತ್ತು.
ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಒತ್ತಾಯ ಪೂರ್ವಕವಾಗಿ ರೈತರಿಂದ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ…
ಇಂದಿನಿಂದ ಮುಂದಿನ ಮಂಗಳವಾರದವರೆಗೆ ಕೇರಳದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಆಗಮಿಸುವವರತ್ತ ನಿಗಾವಹಿಸಲಾಗುತ್ತಿದೆ.
ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಮಾವು ಹಾಗೂ ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ.
ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.
ನಗರದಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ.