Categories: ವಿದೇಶ

ಏಕಾಏಕಿ ಆಸ್ಪತ್ರೆಗೆ ದಾಖಲಾಗಿದ್ದ ಬ್ರಿಟನ್ ರಾಣಿ ಎರಡನೇ ಎಲಿಜಬೆತ್

ಬ್ರಿಟನ್ ರಾಣಿ ಎಲಿಜಬೆತ್‌ (95) ಹಲವು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಒಂದು ರಾತ್ರಿ ಆಸ್ಪತ್ರೆಯಲ್ಲಿ ಕಳೆದಿದ್ದಾರೆ. ಈ ಬಗ್ಗೆ ಅರಮನೆ ಪ್ರಕಟಣೆ ಹೊರಡಿಸಿದ್ದು, ಪ್ರಾಥಮಿಕ ಆರೋಗ್ಯ ತಪಾಸಣೆಗಳ ಬಳಿಕ ಗುರವಾರ ವಿಂಡ್ಸರ್‌ ಕೋಟೆಯ ಮನೆಗೆ ಮರಳಿರುವುದಾಗಿ ತಿಳಿಸಿದೆ.

‘ಎಲಿಜಬೆತ್‌ ಅವರಿಗೆ ವಿಶ್ರಾಂತಿ ಯ ಅಗತ್ಯವಿದ್ದು, ಕೆಲವು ದಿನ ವಿಶ್ರಾಂತಿ ಪಡೆಯುವಂತೆ ಅವರ ವೈದ್ಯಕೀಯ ಸಿಬ್ಬಂದಿ ಸಲಹೆ ಮಾಡಿದ್ದಾರೆ ಹಾಗೂ ಅವರ ಅನಾರೋಗ್ಯವು ಕೋವಿಡ್-19ಗೆ ಸಂಬಂಧಿಸಿದಲ್ಲಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಮೂಲಗಳ ಪ್ರಕಾರ ಅವರು, ಸೆಂಟ್ರಲ್‌ ಲಂಡನ್‌ನ ಕಿಂಗ್‌ ಎಡ್ವರ್ಡ್‌ VII ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದಾರೆ. “ರಾಣಿ ಎಲಿಜಬೆತ್‌ ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ. ಸ್ಥಿರವಾಗಿದೆ. ಗುರುವಾರ ರಾತ್ರಿ ವಿಂಡ್ಸರ್‌ನಲ್ಲಿ ಏರ್ಪಡಿಸಲಾದ ಪಾನೀಯ ಕೂಟದಲ್ಲಿ ಕೂಡ ಎಲಿಜಬೆತ್ ಭಾಗಿಯಾಗಿದ್ದರು. ಸಂತೋಷದಿಂದ ನಗುತ್ತ ಅತಿಥಿಗಳೊಂದಿಗೆ ಸಮಯ ಕಳೆದಿದ್ದಾರೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ

ರಾಣಿಯಾಗಿ ಅಧಿಕಾರವಹಿಸಿಕೊಂಡು ಮುಂದಿನ ವರ್ಷಕ್ಕೆ 70 ವರ್ಷ ಪೂರೈಸಲಿರುವ ಎಲಿಜಬೆತ್‌, 2013ರ ನಂತರ ಇದೇ ಮೊದಲ ಬಾರಿಗೆ ಒಂದು ರಾತ್ರಿ ಆಸ್ಪತ್ರೆಯಲ್ಲಿ ಕಳೆದಿದ್ದಾರೆ. 2018ರಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸೆ ಹಾಗೂ 2003ರಲ್ಲಿ ಮಂಡಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

Sneha Gowda

Recent Posts

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

16 mins ago

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

43 mins ago

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

60 mins ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

1 hour ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

1 hour ago

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

2 hours ago