News Karnataka Kannada
Thursday, May 02 2024
ವಿದೇಶ

ಒಂದೂವರೆ ವರ್ಷದ ಬಳಿಕ ಚೀನಾದಲ್ಲಿ ಕೋವಿಡ್‌ನಿಂದ ಇಬ್ಬರ ಸಾವು

Covid Test
Photo Credit :

ಬೀಜಿಂಗ್: ಈಶಾನ್ಯ ಪ್ರಾಂತ್ಯ ಜಿಲಿನ್‌ನಲ್ಲಿ ಸುಮಾರು ಒಂದೂವರೆ ವರ್ಷದ ಬಳಿಕ ಕೋವಿಡ್‌ನಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗ ಶನಿವಾರ ತಿಳಿಸಿದೆ.

ಚೀನಾದಲ್ಲಿ ಶನಿವಾರ 4,051 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಶುಕ್ರವಾರ 4,365 ಪ್ರಕರಣಗಳು ದೃಢಪಟ್ಟಿದ್ದವು.

ಈ ಹಿಂದೆ 2021ರ ಜನವರಿ 26ರಂದು ಕೋವಿಡ್‌ನಿಂದಾಗಿ ಮೃತಪಟ್ಟ ಪ್ರಕರಣ ವರದಿಯಾಗಿತ್ತು. ಆ ಬಳಿಕ ಈವರೆಗೆ ಚೀನಾದಲ್ಲಿ ಕೋವಿಡ್‌ನಿಂದಾಗಿ ಮರಣ ಸಂಭವಿಸಿರಲಿಲ್ಲ.

ಜಿಲಿನ್‌ನಲ್ಲಿ ಕಳೆದ ಒಂದು ವಾರದಿಂದ ಸಾವಿರಾರು ಕೋವಿಡ್ ಪ್ರಕರಣಗಳು ವರದಿಯಾಗಿವೆ. ಸೋಂಕಿತರ ಚಿಕಿತ್ಸೆಗಾಗಿ ಎಂಟು ತಾತ್ಕಾಲಿಕ ಆಸ್ಪತ್ರೆಗಳನ್ನು ನಿರ್ಮಿಸಲಾಗಿದೆ.

ಕೊರೊನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್‌ನಿಂದಾಗಿ ಚೀನಾ ಮತ್ತು ಇತರ ಕೆಲವು ದೇಶಗಳಲ್ಲಿ ಪ್ರಕರಣಗಳಲ್ಲಿ ಏರಿಕೆ ಕಂಡುಬಂದಿದೆ. ದಕ್ಷಿಣ ಕೊರಿಯಾ, ಹಾಂಗ್‌ಕಾಂಗ್‌, ಜರ್ಮನಿಯಲ್ಲಿಯೂ ಕಳೆದ ಕೆಲವು ದಿನಗಳಿಂದ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು