Categories: ವಿದೇಶ

ಒಮಿಕ್ರಾನ್ ಗಿಂತಲೂ ಪ್ರಬಲವಾದ ತಳಿ ಪತ್ತೆ ಮಾಡಿದ ಫ್ರಾನ್ಸ್​ನ ವಿಜ್ಞಾನಿಗಳು

ಫ್ರಾನ್ಸ್ : ಡೆಡ್ಲಿ ಕೊರೊನಾ ಸೃಷ್ಟಿಸುತ್ತಿರುವ ಅವಾಂತರ ಅಷ್ಟಿಷ್ಟಲ್ಲ. ಕಳೆದೆರಡು ವರ್ಷಗಳಿಂದ ಕೊರೊನಾ ಆರ್ಭಟಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಹೊಸ ವರ್ಷದಲ್ಲಾದರೂ ಕೊರೊನಾ ದೂರವಾಗುತ್ತೆ ಅಂತಾ ಕಾಯುತ್ತಿದ್ದವರಿಗೆ ಮತ್ತೊಂದು ಬಿಗ್‌ ಶಾಕ್‌ ಎದುರಾಗಿದ್ದು, ಕೊರೊನಾ ವೈರಸ್​ನ ಹೊಸ ರೂಪಾಂತರಿಯಾದ ಓಮಿಕ್ರಾನ್​ ವಿಶ್ವಾದ್ಯಂತ ಸೋಂಕಿನ ಸಂಖ್ಯೆಯನ್ನು ಹೆಚ್ಚಿಸುತ್ತಿದೆ.

ಓಮಿಕ್ರಾನ್​ ಆರ್ಭಟದಿಂದ ಇಡೀ ಜಗತ್ತೇ ಕಂಗಾಲಾಗಿರುವ ಬೆನ್ನಲ್ಲೇ ಇದೀಗ ಫ್ರಾನ್ಸ್​ನ ವಿಜ್ಞಾನಿಗಳು ಓಮಿಕ್ರಾನ್​​ನ ಹೊಸ ರೂಪಾಂತರಿತ ತಳಿಯನ್ನು ಪತ್ತೆ ಮಾಡಿದ್ದಾರೆ.!

IHU ಎಂದು ಹೆಸರಿಸಲಾದ, B.1.640.2 ರೂಪಾಂತರಿಯನ್ನು IHU ಮೆಡಿಟರೇನಿ ಇನ್‌ಫೆಕ್ಷನ್‌ನಲ್ಲಿನ ಶಿಕ್ಷಣ ತಜ್ಞರು ಕಂಡುಹಿಡಿದಿದ್ದಾರೆ. ಇದು ಓಮಿಕ್ರಾನ್​​ಗಿಂತಲೂ ಹೆಚ್ಚು ಅಂದರೆ 46ಕ್ಕೂ ಅಧಿಕ ರೂಪಾಂತರಗಳನ್ನು ಹೊಂದಿದೆ. ಇವು ಲಸಿಕೆಗಳ ವಿರುದ್ಧವೂ ಗೆಲ್ಲಬಲ್ಲವು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹೊಸ ರೂಪಾಂತರದ ಕನಿಷ್ಠ 12 ಪ್ರಕರಣಗಳು ಮಾರ್ಸಿಲ್ಲೆಸ್ ಬಳಿ ವರದಿಯಾಗಿದೆ.

ಇದನ್ನು ಆಫ್ರಿಕನ್ ದೇಶ ಕ್ಯಾಮರೂನ್‌ಗೆ ಪ್ರಯಾಣಿಸಿದ್ದಕ್ಕೆ ಲಿಂಕ್ ಮಾಡಲಾಗಿದೆ. ವಿಶ್ವದ ಬಹುತೇಕ ಭಾಗಗಳಲ್ಲಿ ಪ್ರಸ್ತುತ ಓಮಿಕ್ರಾನ್​​ ರೂಪಾಂತರಿಯು ಪ್ರಬಲ ತಳಿಯಾಗಿದೆ. ಆದರೆ ಈ ನಡುವೆಯೂ ಐಹೆಚ್​ಯು ಇನ್ನಷ್ಟು ಭೀಕರತೆಯನ್ನು ಹೆಚ್ಚಿಸಿದೆ. B.1.640.2 ಅನ್ನು ಇತರೆ ಯಾವುದೇ ದೇಶಗಳಲ್ಲಿ ಗುರುತಿಸಲಾಗಿಲ್ಲ ಅಥವಾ ವಿಶ್ವ ಆರೋಗ್ಯ ಸಂಸ್ಥೆಯು ಈ ಓಮಿಕ್ರಾನ್ ಆತಂಕದ ಬೆನ್ನಲ್ಲೇ ಮತ್ತೊಂದು ರೂಪಾಂತರ ವೈರಸ್‌ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದೆ.

Gayathri SG

Recent Posts

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

3 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

22 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

32 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

1 hour ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

1 hour ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

1 hour ago