Categories: ವಿದೇಶ

ಕಪಾಳ ಮೋಕ್ಷ ಪ್ರಕರಣ:ಆಸ್ಕರ್ ಪ್ರಶಸ್ತಿ ಸಮಾರಂಭಕ್ಕೆ ವಿಲ್ ಸ್ಮಿತ್‌ಗೆ 10 ವರ್ಷಗಳ ನಿಷೇಧ

ಲಾಸ್ ಏಂಜಲೀಸ್: ಆಸ್ಕರ್-2022ರ ಕಾರ್ಯಕ್ರಮದಲ್ಲಿ ಹಾಸ್ಯನಟ ಕ್ರಿಸ್ ರಾಕ್​ಗೆ ಕಪಾಳಮೋಕ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಲಿವುಡ್ ನಟ ವಿಲ್​ಸ್ಮಿತ್ ಅವರನ್ನು 10 ವರ್ಷಗಳ ಕಾಲ ಅಕಾಡೆಮಿಯ ಎಲ್ಲಾ ಈವೆಂಟ್‌ಗಳಿಗೆ ನಿಷೇಧಿಸಲು ಅಕಾಡೆಮಿ ಆಫ್ ಮೋಷನ್ ಪಿಕ್ಚರ್ಸ್ ಆರ್ಟ್ಸ್ ಆಯಂಡ್ ಸೈನ್ಸಸ್​ನ ಆಡಳಿತ ಮಂಡಳಿ ನಿರ್ಧಾರ ಮಾಡಿದೆ.

ಈ ಕುರಿತು ಅಕಾಡೆಮಿ ಹೇಳಿಕೆ ಬಿಡುಗಡೆ ಮಾಡಿದೆ.’ವಿಲ್ ಸ್ಮಿತ್ ಅವರ ರಾಜೀನಾಮೆಯನ್ನು ಅಂಗೀಕರಿಸುವುದರ ಜೊತೆಗೆ, ಆಸ್ಕರ್‌ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿಲ್ ಸ್ಮಿತ್ ನಡೆದುಕೊಂಡ ರೀತಿಗೆ ಯಾವ ರೀತಿ ಪ್ರತಿಕ್ರಿಯೆ ನೀಡಬೇಕು ಎಂದು ಚರ್ಚಿಸಲು ಆಡಳಿತ ಮಂಡಳಿಯು ಸಭೆಯನ್ನು ಕರೆದಿದೆ.

ಇದರೊಂದಿಗೆ ಏಪ್ರಿಲ್ 8 ರಿಂದ 10 ವರ್ಷಗಳ ಅವಧಿಗೆ ವಿಲ್​ಸ್ಮಿತ್ ಅವರನ್ನು ಅಕಾಡೆಮಿ ನಿಷೇಧ ಮಾಡಿದೆ. ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭಗಳನ್ನು ಒಳಗೊಂಡಂತೆ ಯಾವುದೇ ಅಕಾಡೆಮಿ ಕಾರ್ಯಕ್ರಮಗಳಿಗೆ ಹಾಜರಾಗಲು ಸ್ಮಿತ್‌ಗೆ ಅನುಮತಿ ನೀಡಲಾಗುವುದಿಲ್ಲ’ ಎಂದು ಅಕಾಡೆಮಿ ಅಧ್ಯಕ್ಷ ಡೇವಿಡ್ ರೂಬಿನ್ ಮತ್ತು ಸಿಇಒ ಡಾನ್ ಹಡ್ಸನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಲಾಸ್ ಏಂಜಲೀಸ್‌ನಲ್ಲಿ ಶುಕ್ರವಾರ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆರಂಭದಲ್ಲಿ ಈ ಸಭೆಯನ್ನು ಏಪ್ರಿಲ್ 18ರಂದು ನಿಗದಿ ಮಾಡಲಾಗಿತ್ತು. ಆದರೆ ಕಳೆದ ವಾರ ವಿಲ್​ಸ್ಮಿತ್ ರಾಜೀನಾಮೆ ಘೋಷಿಸಿದ ನಂತರ, ಸಭೆಯನ್ನು ಶುಕ್ರವಾರವೇ ನಡೆಸಲಾಗಿದೆ ಎಂದು ಸಿಎನ್​ಎನ್​ ವರದಿ ಮಾಡಿದೆ.

94ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿಂದಿನ ವರ್ಷ ಸಿನಿಮಾಗೆ ಅದ್ಭುತವಾಗಿ ಕೆಲಸ ಮಾಡಿದವರ ಸಾಧನೆಯನ್ನು ಸಂಭ್ರಮಿಸಬೇಕಿತ್ತು. ಆದರೆ ವಿಲ್​ಸ್ಮಿತ್ ವೇದಿಕೆಯಲ್ಲಿ ನಡೆದುಕೊಂಡ ರೀತಿಯಿಂದಾಗಿ ಸಂಭ್ರಮದ ಕ್ಷಣಗಳು ಮರೆಯಾಗಿವೆ. ಅವರ ನಡವಳಿಕೆಗಳು ಖಂಡಿತಾ ಸ್ವೀಕಾರಾರ್ಹವಲ್ಲ ಎಂದು ಅಕಾಡೆಮಿ ಹೇಳಿಕೆಯಲ್ಲಿ ಉಲ್ಲೇಖಿಸಿದೆ

Swathi MG

Recent Posts

ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನ ಪಡೆದುಕೊಂಡ ಯಶ್‌ ಹೀರೋಯಿನ್‌!

ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.

8 hours ago

ಐದು ಮಂದಿಗೆ ವೆಸ್ಟ್ ನೈಲ್ ಜ್ವರ ಪತ್ತೆ; ಅಲರ್ಟ್ ಆದ ಸರಕಾರ

ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.

8 hours ago

ಆಂಬುಲೆನ್ಸ್ ನೌಕರರ ಮುಷ್ಕರ ತಾತ್ಕಾಲಿಕ ಮುಂದೂಡಿಕೆ

ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.

8 hours ago

ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ

ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

9 hours ago

ಪಕ್ಷದ ಬ್ಯಾಡ್ಜ್ ಧರಿಸಿ ಮತದಾನ; ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…

9 hours ago

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

9 hours ago