Categories: ವಿದೇಶ

ಕಾಬೂಲ್ ತೊರೆಯುವಂತೆ ತನ್ನ ಪ್ರಜೆಗಳಿಗೆ ಸೂಚಿಸಿದ ಆಮೇರಿಕ

ಕಾಬೂಲ್:  ಕಾಬೂಲ್ ವಿಮಾನ ನಿಲ್ದಾಣದ ಸ್ಫೋಟದ ನಂತರ, ಗುರುವಾರ ಕಾಬೂಲ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿಯು ತನ್ನ ನಾಗರಿಕರಿಗೆ ಕಾಬೂಲ್ ವಿಮಾನ ನಿಲ್ದಾಣದಿಂದ ದೂರವಿರುವಂತೆ ಎಚ್ಚರಿಕೆ ನೀಡಿದ್ದಲ್ಲದೆ ಆದಷ್ಟು ಬೇಗ ಕಾಬೂಲ್ ತೊರೆಯುವಂತೆಯೂ ಸೂಚನೆ ನೀಡಿತು.

ಪ್ರಮುಖವಾಗಿ ಕಾಬೂಲ್ ವಿಮಾನ ನಿಲ್ದಾಣದ ಅಬ್ಬೆ ಗೇಟ್, ಈಸ್ಟ್ ಗೇಟ್ ಅಥವಾ ನಾರ್ತ್ ಗೇಟ್ ನಲ್ಲಿರುವ ಅಮೆರಿಕ ನಾಗರಿಕರು ಈಗಲೇ ತುರ್ತಾಗಿ ಹೊರಡಬೇಕು ಎಂದು ಹೇಳಲಾಗಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಈ ವಿಚಾರವಾಗಿ ಮಾಹಿತಿ ನೀಡಿದ ಅಮೆರಿಕದ ಗುಪ್ತಚರ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ‘ಅಫ್ಘಾನಿಸ್ತಾನದ ಇಸ್ಲಾಮಿಕ್ ಸ್ಟೇಟ್ ಅಂಗಸಂಸ್ಥೆ ಇಸಿಸ್ ಕೆಯಿಂದ ವಿಮಾನ ನಿಲ್ದಾಣದಲ್ಲಿ “ನಿರ್ದಿಷ್ಟ” ಮತ್ತು “ನಂಬಲರ್ಹ” ಸಂಭಾವ್ಯ ದಾಳಿ ಸಂಚನ್ನು ಟ್ರ್ಯಾಕ್ ಮಾಡಲಾಗಿದೆ. ಉಗ್ರರು ಕನಿಷ್ಠ 12ಕ್ಕೂ ಹೆಚ್ಚು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ. ದಾಳಿಗಳಿಗೆ ಜನಾಂಗೀಯ ಅಲ್ಪಸಂಖ್ಯಾತರು ಮತ್ತು ಇತರೆ ದೇಶಗಳ ನಾಗರಿಕರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ದೇಶ ತೊರೆಯುವ ಕುರಿತು ಆಗಸ್ಟ್ 31 ರ ತಾಲಿಬಾನ್ ಗಡುವಿನ ಮೊದಲು ವಿಮಾನ ನಿಲ್ದಾಣಕ್ಕೆ ತೆರಳಲು ಪ್ರಯತ್ನಿಸುತ್ತಿರುವ ಅಂದಾಜು 1,500 ಅಮೆರಿಕನ್ನರು ಮತ್ತು ಇನ್ನೂ ಅಫ್ಘಾನಿಸ್ಥಾನದಲ್ಲಿರುವ ಇತರೆ ವಿದೇಶಿಗರು ವಿಮಾನ ನಿಲ್ದಾಣಕ್ಕೆ ದೌಡಾಯಿಸುತ್ತಿದ್ದು, ಇದೇ ಸಂದರ್ಭದಲ್ಲೇ ಈ ಎಚ್ಚರಿಕೆ ರವಾನೆಯಾಗಿರುವುದು ಪರಿಸ್ಥಿತಿಯ ಗಂಭೀರತೆಯನ್ನು ತೋರಿಸುತ್ತಿದೆ.  ವಿಮಾನ ನಿಲ್ದಾಣದಲ್ಲಿ ಸಂಭವನೀಯ ಭದ್ರತಾ ಬೆದರಿಕೆಗಳ ಬಗ್ಗೆ ಅಮೆರಿಕ ಸರ್ಕಾರವು ಎಚ್ಚರಿಕೆ ನೀಡುತ್ತಿದೆ ಮತ್ತು ವಿಮಾನ ನಿಲ್ದಾಣಕ್ಕೆ ಪ್ರವೇಶವನ್ನು ಸರಿಹೊಂದಿಸಲಾಗಿದೆ, ಕೆಲವು ಗೇಟ್‌ಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ ಎಂದು ತಿಳಿದುಬಂದಿದೆ.

ಮೊದಲು, ಬ್ರಿಟಿಷ್ ಮತ್ತು ಆಸ್ಟ್ರೇಲಿಯಾ ಸರ್ಕಾರಗಳು ಇದೇ ರೀತಿಯ ಎಚ್ಚರಿಕೆಗಳನ್ನು ನೀಡಿದ್ದವು, ಆಸ್ಟ್ರೇಲಿಯಾದ ಅಧಿಕಾರಿಗಳು “ಭಯೋತ್ಪಾದಕ ದಾಳಿಯ ಮುಂದುವರಿದ ಮತ್ತು ಅತಿ ಹೆಚ್ಚಿನ ಬೆದರಿಕೆಯ ಕುರತು ಎಚ್ಚರಿಕೆ ನೀಡಿದ್ದರು.  ಈ ಬಗ್ಗೆ ಮಾತನಾಡಿದ್ದ ಆಸ್ಟ್ರೇಲಿಯಾದ ವಿದೇಶಾಂಗ ಮಂತ್ರಿ ಮಾರಿಸ್ ಪೇಯ್ನ್, ‘ತಾಲಿಬಾನ್ ಆಸ್ಟ್ರೇಲಿಯಾದ ನಾಗರಿಕರು ಮತ್ತು ವೀಸಾ ಹೊಂದಿರುವವರನ್ನು ಸುರಕ್ಷಿತವಾಗಿ ಬಿಡಲು ಅವಕಾಶ ನೀಡುತ್ತದೆ. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಅದು ಸಾಧ್ಯವಿಲ್ಲ. ಉಗ್ರರು ಹಮೀದ್ ಕರ್ಜೈ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡಿದ್ದಾರೆ. ಹೀಗಾಗಿ ವಿಮಾನ ನಿಲ್ದಾಣಕ್ಕೆ ಬಾರದಂತೆ ಸೂಚನೆ ನೀಡಲಾಗಿದೆ. ಪ್ರಸ್ತುತ ಅದು ಸುರಕ್ಷಿತ ಕೂಡ ಅಲ್ಲ. ಕಾಬೂಲ್ ನಲ್ಲಿದ್ದರೆ ಸುರಕ್ಷಿತ ಸ್ಥಳಗಳಿಗೆ ತೆರಳಿ ಆಶ್ರಯ ಪಡೆಯಿರಿ. ಮುಂದಿನ ಸಲಹೆಗಾಗಿ ಕಾಯಿರಿ ಎಂದು ಹೇಳಿದ್ದಾರೆ.

Raksha Deshpande

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

3 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

3 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

3 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

3 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

3 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

4 hours ago