ಇಸ್ಲಾಮಾಬಾದ್: ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿರುವ ಮಸೀದಿಯಲ್ಲಿ ಸೇರಿದಂತೆ ಹಲವೆಡೆ ಬುಧವಾರ ಸರಣಿ ಬಾಂಬ್ ಸ್ಫೋಟಗಳು ಸಂಭವಿಸಿದ್ದು, ಪ್ರಾರ್ಥನೆ ಸಲ್ಲಿಸುತ್ತಿದ್ದ ಐವರು ಸೇರಿದಂತೆ ಕನಿಷ್ಠ 14 ಮಂದಿ ಮೃತಪಟ್ಟಿದ್ದಾರೆ.
ಬುಧವಾರ ಸಂಜೆ ವೇಳೆಗೆ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಬಾಂಬ್ ಸ್ಫೋಟದಲ್ಲಿ ಸಿಲುಕಿದ್ದ 22 ಮಂದಿ ಸಂತ್ರಸ್ತರನ್ನು ಕಾಬೂಲ್ನ ತುರ್ತು ಆಸ್ಪತ್ರೆಗೆ ದಾಖಲಿಸಿಲಾಗಿದೆ ಎಂದು ತಾಲಿಬಾನ್ ಪೊಲೀಸ್ ವಕ್ತಾರ ತಿಳಿಸಿದ್ದಾರೆ.