ಕೀವ್: ಸೋಮವಾರ ಬೆಳಿಗ್ಗೆ ಉಕ್ರೇನ್ ರಾಜಧಾನಿ ಕೀವ್ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ ಕನಿಷ್ಠ ಇಬ್ಬರು ಮೃತಪಟ್ಟಿದ್ದು ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಕೀವ್ನ ವಸತಿ ಕಟ್ಟಡದ ಮೇಲೆ ನಡೆದ ದಾಳಿಯಲ್ಲಿ ಕನಿಷ್ಠ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ ಎಂದು ಉಕ್ರೇನ್ನ ಟಿವಿ ಮಾಧ್ಯಮ ವರದಿ ಮಾಡಿದೆ.
ಈ ಕುರಿತು ಅಲ್ಲಿನ ಆಂತರಿಕ ಸಚಿವಾಲಯದ ಸಲಹೆಗಾರ ಆಂಟನ್ ಗೆರಾಶ್ಚೆಂಕೊ ಕೂಡ ಮಾಹಿತಿ ನೀಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಈ ಮಧ್ಯೆ, ಉಕ್ರೇನ್ ತೊರೆಯುವಂತೆ ತನ್ನ ಪ್ರಜೆಗಳಿಗೆ ಅಮೆರಿಕದ ರಾಯಭಾರ ಕಚೇರಿ ಸೋಮವಾರ ಸೂಚಿಸಿದೆ.