Categories: ವಿದೇಶ

ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ: ಶಾಂಘೈನಲ್ಲಿ ಸಾರಿಗೆ ನಿರ್ಬಂಧ ಮುಂದುವರಿಕೆ

ಶಾಂಘೈ : ಚೀನಾದ ಪ್ರಮುಖ ವಾಣಿಜ್ಯ ನಗರಿ ಶಾಂಘೈನಲ್ಲಿ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆ 13,000ಕ್ಕೆ ಹೆಚ್ಚಳವಾಗಿದ್ದು, ಮಂಗಳವಾರ ನಗರದಾದ್ಯಂತ ಸಾರಿಗೆ ಮೇಲಿನ ನಿರ್ಬಂಧಗಳನ್ನು ವಿಸ್ತರಿಸಲಾಗಿದೆ.

ಕಳೆದ ವಾರ ನಗರದಲ್ಲಿ ಅತಿ ಹೆಚ್ಚು ಕೋವಿಡ್ ಪ್ರಕರಣಗಳು ದೃಢಪಡಲು ಪ್ರಾರಂಭವಾದ ಬಳಿಕ ಆರ್ಥಿಕತೆ ತೊಡಕಾಗದಂತೆ ಕೆಲ ನಿರ್ಬಂಧಗಳನ್ನು ಹೇರಲಾಗಿತ್ತು. ನಿಗದಿಯಂತೆ ಮಂಗಳವಾರವೇ ಈ ಲಾಕ್‌ಡೌನ್ ಅಂತ್ಯವಾಗಬೇಕಿತ್ತು. ಆದರೆ, ಕೋವಿಡ್ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೂ ನಿರ್ಬಂಧಗಳನ್ನು ಮುಂದುವರಿಸಲಾಗಿದೆ.

ಏಪ್ರಿಲ್ 4ರಂದು ಶಾಂಘೈನಲ್ಲಿ ಹೊಸದಾಗಿ ರೋಗಲಕ್ಷಣವಿಲ್ಲದ 13,086 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಸರ್ಕಾರವು ತನ್ನ ಅಧಿಕೃತ ವೀಚಾಟ್ ಖಾತೆ ಮೂಲಕ ತಿಳಿಸಿವೆ. ಭಾನುವಾರ 8,581ರಷ್ಟಿದ್ದ ಪ್ರಕರಣಗಳ ಸಂಖ್ಯೆ ದಿಢೀರ್ ಏರಿಕೆ ಕಂಡಿದೆ. 2.5 ಕೋಟಿಗೂ ಅಧಿಕ ಜನರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ.

ಕೋವಿಡ್ ನಿರ್ವಹಣೆಗಾಗಿ ಕನಿಷ್ಠ 38,000 ಸಿಬ್ಬಂದಿಯನ್ನು ಶಾಂಘೈನಲ್ಲಿ ನಿಯೋಜಿಸಲಾಗಿದೆ. 2020ರ ಬಳಿಕ ಇದು ಚೀನಾದ ಅತಿದೊಡ್ಡ ವೈದ್ಯಕೀಯ ಕಾರ್ಯಾಚರಣೆ ಎಂದು ಸರ್ಕಾರಿ ಮಾಧ್ಯಮ ವರದಿ ಮಾಡಿದೆ.

ಸುರಂಗ ಮಾರ್ಗಗಳು ಸೇರಿದಂತೆ ಮಂಗಳವಾರದಿಂದ ನಗರ ಸಾರಿಗೆ ಜಾಲಗಳ ಮೇಲೆ ಹೆಚ್ಚಿನ ನಿರ್ಬಂಧಗಳನ್ನು ವಿಧಿಸಲಾಗುವುದು ಎಂದು ಅಧಿಕಾರಿಗಳು ಸೋಮವಾರ ತಡರಾತ್ರಿ ಘೋಷಿಸಿದ್ದರು.

ಕೋವಿಡ್ ನಿರ್ವಹಣೆಯ ಉಸ್ತುವಾರಿ ವಹಿಸಿರುವ ಚೀನಾದ ಉಪಪ್ರಧಾನಿ ಸನ್ ಚುನ್ಲಾನ್ ಸೋಮವಾರ ಶಾಂಘೈನಲ್ಲಿ ಪರೀಕ್ಷಾ ಕೇಂದ್ರಗಳ ಪರಿಶೀಲನೆಯ ಸಂದರ್ಭದಲ್ಲಿ ಕೋವಿಡ್ ತಡೆ ಮತ್ತು ನಿಯಂತ್ರಣ ಕಾರ್ಯವು ಈಗ ನಿರ್ಣಾಯಕ ಹಂತದಲ್ಲಿದೆ. ಪ್ರತಿಯೊಬ್ಬ ನಿವಾಸಿಯನ್ನು ಪರೀಕ್ಷಿಸುವುದು ಅತ್ಯಗತ್ಯ ಎಂದು ಹೇಳಿದರು.

ಆದರೆ, ಶಾಂಘೈನ ಕಠೋರ ಕ್ರಮಗಳ ಬಗ್ಗೆ ಸಾರ್ವಜನಿಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಹೀಗಾಗಿ, ನಿವಾಸಿಗಳ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡಲು ಸಾಧ್ಯವಾದ ಎಲ್ಲವನ್ನೂ ಮಾಡಲು ತಳಮಟ್ಟದ ಪಕ್ಷದ ಸಂಘಟನೆಗಳಿಗೆ ಉಪ ಪ್ರಧಾನಿ ಒತ್ತಾಯಿಸಿದ್ದಾರೆ.

Gayathri SG

Recent Posts

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

19 mins ago

ʼರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕುʼ

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

21 mins ago

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…

41 mins ago

ಫ್ಲೈಯಿಂಗ್ ಎಲೆಕ್ಟ್ರಿಕ್ ಟ್ಯಾಕ್ಸಿ ನಿರ್ಮಿಸಲು ಮುಂದಾದ ಮದ್ರಾಸ್ ಐಐಟಿ-ಶ್ಲಾಘಿಸಿದ ಆನಂದ್ ಮಹೀಂದ್ರಾ

ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‍ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…

53 mins ago

ಜಮ್ಮು –ಕಾಶ್ಮೀರ : ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್)…

1 hour ago

ನೂಕುನುಗ್ಗಲಿನಲ್ಲೂ ಪಾದಯಾತ್ರೆ ಹೊರಟ ಭಕ್ತರು : ವಿಡಿಯೋ ವೈರಲ್‌

ಯಮುನೋತ್ರಿ, ಗಂಗೋತ್ರಿ, ಕೇದರ್‌ನಾಥ್‌ ಮತ್ತು ಬದರಿನಾಥ್‌ ಪವಿತ್ರ ಚಾರ್‌ ಧಾಮ್‌ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…

1 hour ago