News Karnataka Kannada
Saturday, May 04 2024
ವಿದೇಶ

ಕೋವಿಡ್‌ ಬೂಸ್ಟರ್‌ ಡೋಸ್‌ ಪಡೆದುಕೊಂಡವರಿಗೆ ಮಾತ್ರ ವಿದೇಶ ಪ್ರಯಾಣಕ್ಕೆ ಅವಕಾಶ; ಸೌದಿ

Vaccination
Photo Credit : IANS

ರಿಯಾದ್ :‌ ಕೋವಿಡ್‌ ಬೂಸ್ಟರ್‌ ಡೋಸ್‌ ಪಡೆದುಕೊಂಡಿರುವವರಿಗೆ ಮಾತ್ರವೇ ವಿದೇಶಗಳಿಗೆ ಪ್ರಯಾಣಿಸಲು ಫೆಬ್ರುವರಿ 9ರಿಂದ ಅವಕಾಶ ಕಲ್ಪಿಸಲಾಗುವುದು ಎಂದು ಸೌದಿ ಅರೇಬಿಯಾ ಘೋಷಿಸಿದೆ.

ಸ್ಥಳೀಯ ಮತ್ತು ಜಾಗತಿಕವಾಗಿ ಸಾಂಕ್ರಾಮಿಕದ ಪರಿಸ್ಥಿತಿಯ ನಿರಂತರ ಅವಲೋಕನವನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆಂತರಿಕ ಸಚಿವಾಲಯ ತಿಳಿಸಿರುವುದಾಗಿ ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಸೇರಿದಂತೆ ಕೆಲ ಗುಂಪಿನ ಜನರಿಗೆ ಈ ನಿಯಮದಿಂದ ವಿನಾಯಿತಿ ನೀಡಲಾಗಿದೆ. ಇದೇ ವೇಳೆ ವಿದೇಶಗಳಿಂದ ಬರುವ ಸೌದಿ ನಾಗರಿಕರು ಕೋವಿಡ್‌ ಪರೀಕ್ಷೆಯ ನೆಗೆಟಿವ್‌ ವರದಿ ನೀಡಿದರೆ ದೇಶದೊಳಗೆ ಪ್ರವೇಶಿಸಲು ಅವಕಾಶ ನೀಡಲಾಗುವುದು ಎಂದೂ ಹೇಳಲಾಗಿದೆ.

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕೋವಿಡ್‌ ದೃಢಪಟ್ಟ 3,852 ಹೊಸ ಪ್ರಕರಣಗಳು ಗುರುವಾರ ವರದಿಯಾಗಿವೆ. ಇದರೊಂದಿಗೆ, ಸಾಂಕ್ರಾಮಿಕ ಕಾಣಿಸಿಕೊಂಡಾಗಿನಿಂದ ಇಲ್ಲಿಯವರೆಗೆ ಸೌದಿಯಲ್ಲಿ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 6,99,069ಕ್ಕೆ ಏರಿದೆ. ಈ ಪೈಕಿ 6,53,972 ಸೋಂಕಿತರು ಗುಣಮುಖರಾಗಿದ್ದು, 8,947 ಮಂದಿ ಸಾವಿಗೀಡಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು