News Karnataka Kannada
Monday, April 29 2024
ವಿದೇಶ

ಖಾರ್ಖಿವ್ ನಿಂದ ಇಂದು ಉಕ್ರೇನ್ ಗಡಿಗೆ ನವೀನ್ ಮೃತದೇಹ ರವಾನೆ

Haveri Student
Photo Credit : Twitter

ಬೆಂಗಳೂರು : ಉಕ್ರೇನ್-ರಷ್ಯಾ ಯುದ್ಧದಲ್ಲಿ ರಷ್ಯಾ ನಡೆಸಿದ ದಾಳಿಯಲ್ಲಿ ಉಕ್ರೇನ್ ನಲ್ಲಿ ವೈದ್ಯಕೀಯ ವಿದ್ಯಾಭ್ಯಾಸ ಮಾಡುತ್ತಿದ್ದ ನವೀನ್ ಬಲಿಯಾಗಿದ್ದರು.

ಸದ್ಯ ನವೀನ್ ಮೃತದೇಹವನ್ನು ಖಾರ್ಕೀವ್ ನಗರದ ಶವಾಗಾರದಲ್ಲಿ ಇರಿಸಲಾಗಿದೆ. ಸದ್ಯ ಖಾರ್ಕೀವ್ ನಲ್ಲಿ ಶೆಲ್ಲಿಂಗ್ ಮಾಡುತ್ತಿರುವ ಹಿನ್ನೆಲೆಯಲ್ಲಿ ನವೀನ್ ಮೃತದೇಹ ಆಗಮನದ ಸಮಯದಲ್ಲಿ ಕೊಂಚ ಬದಲಾವಣೆ ಸಾಧ್ಯತೆ ಇದೆ ಎನ್ನಲಾಗಿದೆ.

ರಷ್ಯಾ ಸೇನೆ ನಡೆಸಿದ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ ನವೀನ್ ಮೃತದೇಹವನ್ನು ಇಂದು ಖಾರ್ಕೀವ್ ನಿಂದ ಉಕ್ರೇನ್ ಗಡಿಗೆ ರವಾನೆ ಮಾಡುವ ಸಾಧ್ಯತೆ ಇದೆ.

ಅವರ ಮೃತದೇಹವನ್ನು ಮಾ.21 ಕ್ಕೆ ರಾಜ್ಯಕ್ಕೆ ಬರಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದರು.ರಷ್ಯಾ ದಾಳಿ ಸಂದರ್ಭದಲ್ಲಿ ಮೃತ ಪಟ್ಟ ಹಾವೇರಿ ಜಿಲ್ಲೆಯ ಯುವಕ ನವೀನ್ ಗ್ಯಾನಗೌಡರ್ ಅವರ ಪಾರ್ಥಿವ ಶರೀರ ಮಾ. 21 ರಂದು ಸೋಮವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು,.

ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಉಕ್ರೇನ್ ನಲ್ಲಿ ರಷ್ಯಾ ದಾಳಿ ಸಂದರ್ಭದಲ್ಲಿ ಮೃತ ಪಟ್ಟ ಹಾವೇರಿ ಜಿಲ್ಲೆಯ ಯುವಕ ನವೀನ್ ಗ್ಯಾನಗೌಡರ್ ಅವರ ಪಾರ್ಥಿವ ಶರೀರ ಮಾ. 21 ರಂದು ಸೋಮವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು