ವಿದೇಶ

ಚೀನಾದಲ್ಲಿ ಭೂಕಂಪನ: ಇದೀಗ ಸುಮಾರು 14,427 ಮಂದಿ ನಿರಾಶ್ರಿತ!

ಚೀನಾ: ನೈಋತ್ಯ ಚೀನಾದ ಸಿಚುವಾನ್‌ನಲ್ಲಿರುವ ಯಾನ್ ನಗರದಲ್ಲಿ ಬುಧವಾರ 6.1 ತೀವ್ರತೆಯ ಭೂಕಂಪ ಸಂಭವಿಸಿತ್ತು. ದುರಂತದಲ್ಲಿ ನಾಲ್ವರು ಸಾವನ್ನಪಿದ್ದು, 41 ಮಂದಿ ಗಾಯಗೊಂಡಿದ್ದಾರೆ ಎಂದು ಗುರುವಾರ ನಗರದ ಭೂಕಂಪ ಪರಿಹಾರ ಕೇಂದ್ರ ಕಚೇರಿ ತಿಳಿಸಿದೆ.

ಇದೀಗ ಭೂಕಂಪದಿಂದ ಒಟ್ಟು 14,427 ಜನರು ಬಾಧಿತರಾಗಿದ್ದಾರೆ ಎಂದು ಪ್ರಾಥಮಿಕ ಅಂಕಿಅಂಶಗಳನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಸ್ಥಳೀಯ ತುರ್ತು ರಕ್ಷಣಾ ಪ್ರಯತ್ನಗಳಿಗೆ ಮಾರ್ಗದರ್ಶನ ನೀಡಲು ಮತ್ತು ಸಹಾಯ ಮಾಡಲು ರಕ್ಷಣಾ ತಂಡಗಳನ್ನು ಕಳುಹಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಸ್ಥಳೀಯ ಅಗ್ನಿಶಾಮಕ ದಳ, ತುರ್ತು ರಕ್ಷಣಾ, ಸಶಸ್ತ್ರ ಪೊಲೀಸ್, ವೈದ್ಯಕೀಯ ಸಿಬ್ಬಂದಿ ಮತ್ತು ಸಾರ್ವಜನಿಕ ಭದ್ರತಾ ಕಚೇರಿ ಸೇರಿದಂತೆ 800ಕ್ಕೂ ಹೆಚ್ಚು ಸಿಬ್ಬಂದಿಯನ್ನು ಈಗಾಗಲೇ ಭೂಕಂಪ ಪೀಡಿತ ಪ್ರದೇಶಗಳಿಗೆ ಕಳುಹಿಸಲಾಗಿದೆ.

ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ 4,500ಕ್ಕಿಂತ ಹೆಚ್ಚು ಜನರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಭೂಕಂಪದಿಂದ ಅಪಾರ ಆಸ್ತಿ-ಪಾಸ್ತಿ ನಷ್ಟವಾಗಿದೆ. ಇದೀಗ ಸುಮಾರು 14,427 ಮಂದಿ ನಿರಾಶ್ರತಿರಾಗಿರುವುದಾಗಿ ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

Sneha Gowda

Recent Posts

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

24 mins ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

40 mins ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

1 hour ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

1 hour ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

2 hours ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

2 hours ago