ವಿದೇಶ

ಚೀನಾದ ದೊಡ್ಡ ನಗರಗಳಲ್ಲಿ ಲಾಕ್ ಡೌನ್ ಘೋಷಣೆ

ಬೀಚಿಂಗ್ : ಚೀನಾದ ಶೆನ್ ಝೆನ್ ನಗರದಲ್ಲಿ ಕಳೆದೊಂದು ವಾರದಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ.ಚೀನಾದ ಹಲವು ನಗರಗಳಲ್ಲಿ ಮತ್ತೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಸುಮಾರು 1.75 ಕೋಟಿ ಜನಸಂಖ್ಯೆಯಿರುವ ಶೆನ್ ಝೆನ್ ನಗರದಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಚೀನಾದಲ್ಲಿ ಇತ್ತೀಚೆಗೆ ಒಟ್ಟು 3,400 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಸರ್ಕಾರವು ನಗರದ ಎಲ್ಲ ನಿವಾಸಿಗಳನ್ನು ಮೂರು ಬಾರಿ ತಪಾಸಣೆಗೆ ಒಳಪಡಿಸಿತ್ತು. ಮಾರ್ಚ್ 20ರವರೆಗೂ ನಿರ್ಬಂಧದ ಆದೇಶಗಳು ಮುಂದುವರಿಯಲಿವೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಪಕ್ಕದ ಹಾಂಗ್​ಕಾಂಗ್​ನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾದ ಬೆನ್ನಿಗೇ ಶೆನ್​ಝೆನ್ ನಗರದಲ್ಲಿಯೂ ಸೋಂಕು ಹೆಚ್ಚಾಗಿದೆ. ಹಾಂಗ್​ಕಾಂಗ್​ನಲ್ಲಿ ಸುಮಾರು 3 ಲಕ್ಷ ಜನರು ಪ್ರಸ್ತುತ ಹೋಂ ಕ್ವಾರಂಟೈನ್​ ಅಥವಾ ಐಸೊಲೇಶನ್​ನಲ್ಲಿದ್ದಾರೆ.

Swathi MG

Recent Posts

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

4 mins ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

28 mins ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

42 mins ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

1 hour ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

1 hour ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

2 hours ago