News Karnataka Kannada
Friday, May 03 2024
ವಿದೇಶ

ಚೀನಾದ ಷಿಯಾನ್ ನಗರದಲ್ಲಿ ಮತ್ತೆ ಲಾಕ್ ಡೌನ್

China
Photo Credit :

ಷಿಯಾನ್: ಚೀನಾದಲ್ಲಿ ಕೋವಿಡ್ ನಿಯಮಾವಳಿಗಳು ಜಾರಿಯಲ್ಲಿದ್ದರೂ ಅತಿ ಹೆಚ್ಚು ಕೊರೋನಾ ಪ್ರಕರಣಗಳು ದಾಖಲಾಗುತ್ತಿವೆ. 2019 ರಲ್ಲಿ ಕೊರೋನವೈರಸ್ ಸಾಂಕ್ರಾಮಿಕ ಪ್ರಾರಂಭವಾದ ನಂತರದ ದಿನಗಳಲ್ಲಿ ಒಂದು ವಾರದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದೆ. ಷಿಯಾನ್ ನಗರದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿದ್ದು ಈ ಭಾಗದಲ್ಲಿ 10 ದಿನಗಳ ವರೆಗೆ ಲಾಕ್ ಡೌನ್ ಹೇರಲಾಗಿತ್ತು.

ಷಿಯಾನ್ ನಲ್ಲಿ ಕೊರೋನಾ ಪ್ರಕರಣಗಳ ಹೆಚ್ಚಳದ ಹಿಂದಿನ ಕಾರಣವೆಂದರೆ ಪಾಕಿಸ್ತಾನ! ಹೌದು ಅಚ್ಚರಿಯಾದರೂ ಸತ್ಯ! ಪಾಕಿಸ್ತಾನದಿಂದ ಆಗಮಿಸಿದ ಪ್ರಯಾಣಿಕ ವಿಮಾನವೊಂದರಿಂದ ಷಿಯಾನ್ ನಲ್ಲಿ ಮೊದಲ ಕೋವಿಡ್-19 ಪ್ರಕರಣ ವರದಿಯಾಗುವುದಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದ್ದು ಪಾಕಿಸ್ತಾನದಿಂದ ಬಂದ ವಿಮಾನದಲ್ಲಿದ್ದ ಮಂದಿಯಿಂದಲೇ ಕೋವಿಡ್-19 ಸೋಂಕು ಸ್ಥಳೀಯವಾಗಿ ಹರಡುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಷಿಯಾನ್ ನಗರದಲ್ಲಿನ ಕೋವಿಡ್-19 ಪ್ರಕರಣಗಳ ಏರಿಕೆ ದೇಶಾದ್ಯಂತ ಹರಡುವ ಆತಂಕ ಉಂಟುಮಾಡಿದ್ದು, ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕ್ಯಾಂಪಸ್‌ನಿಂದ ಹೊರಗೆ ಹೋಗದಂತೆ ಚೀನಾದಲ್ಲಿ ಸೂಚನೆ ನೀಡಲಾಗಿದೆ. ಇದಲ್ಲದೆ ಜನರ ವಾಹನ ಚಾಲನೆಯನ್ನೂ ಸಹ ನಿಷೇಧ ಮಾಡಲಾಗಿದ್ದು, ಕಟ್ಟುನಿಟ್ಟಿನ ಕ್ರಮಗಳನ್ನ ಚೀನಾದಲ್ಲಿ ಕೈಗೊಳ್ಳಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 1 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು