ಬರ್ಲಿನ್ : ವಿಶ್ವದಾದ್ಯಂತ ಆತಂಕ ಸೃಷ್ಟಿಸಿರುವ ಕೊರನಾ ರೂಪಾಂತರಿ ಒಮಿಕ್ರಾನ್ ಸೋಂಕಿಗೆ ಜಮರ್ನಿಯಲ್ಲಿ ಮೊದಲ ಸಾವು ಸಂಭವಿಸಿದೆ ಎಂದು ಜಮರ್ನಿಯ ರಾಬರ್ಟ್ ಕೊಚ್ ಇನ್ ಸ್ಟಿಟ್ಯೂಟ್ ಫಾರ್ ಸಾಂಕ್ರಾಮಿಕ ರೋಗ ಸಂಸ್ಥೆ ದೃಢಪಡಿಸಿದೆ.
ಜಮರ್ನಿಯಲ್ಲಿ ಒಮಿಕ್ರಾನ್ ಸೋಂಕಿನಿಂದ ಮೊದಲ ವ್ಯಕ್ತಿ ಮೃತಪಟ್ಟಿರುವುದಾಗಿ ರಾಬರ್ಟ್ ಕೋಚ್ ಇನ್ ಸ್ಟಿಟ್ಯೂಟ್ ಫಾರ್ ಸಾಂಕ್ರಾಮಿಕ ರೋಗ ಸಂಸ್ಥೆ ಸ್ಪಷ್ಟಪಡಿಸಿದೆ. ಇನ್ನು ಜರ್ಮನಿಯಲ್ಲಿ 810 ಹೊಸ ಒಮಿಕ್ರಾನ್ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 3,198 ಕ್ಕೆ ಏರಿಕೆಯಾಗಿದೆ.