Categories: ವಿದೇಶ

ಡೆಲ್ಟಾ ಗಿಂತ ಒಮಿಕ್ರಾನ್ ಸೋಂಕಿತ ಮಕ್ಕಳು ಕಡಿಮೆ ಅಪಾಯ ಎದರಿಸಿದ್ದಾರೆ:ಅಧ್ಯಯನ

ವಾಷಿಂಗ್ಟನ್: ಕೊರೊನಾ ರೂಪಾಂತರಿ ಡೆಲ್ಟಾ ಗಿಂತ ಒಮಿಕ್ರಾನ್ ಸೋಂಕಿತ ಮಕ್ಕಳು ಕಡಿಮೆ ಅಪಾಯ ಎದರಿಸಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ.

ಓಮಿಕ್ರಾನ್ ಸೋಂಕಿಗೆ ಒಳಗಾದ ಶೇ.1.8 ರಷ್ಟು ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದರೆ, ಡೆಲ್ಟಾದಲ್ಲಿ ಶೇ.3.3 ರಷ್ಟು ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜೆಎಎಂಎ ಪೀಡಿಯಾಟ್ರಿಕ್ಸ್‍ನ ಜರ್ನಲ್‍ನಲ್ಲಿ ಪ್ರಕಟವಾದ ಸಂಶೋಧನೆಯಲ್ಲಿ ಇನ್ನೂ ಲಸಿಕೆ ಹಾಕಿಸಿಕೊಳ್ಳದ ಐದು ವರ್ಷದೊಳಗಿನ ಮಕ್ಕಳಲ್ಲಿ ಓಮಿಕ್ರಾನ್ ಮತ್ತು ಡೆಲ್ಟಾದಿಂದ ಪರಿಣಾಮಗಳ ಅಧ್ಯಯನ ನಡೆಸಿರುವುದಾಗಿ ತಿಳಿಸಲಾಗಿದೆ.

ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೋವಿಡ್ ನಿರೋಧಕ ಲಸಿಕೆ ನೀಡುವುದು ಸೂಕ್ತವಲ್ಲ. ಲಸಿಕೆ ಮಕ್ಕಳಲ್ಲಿ ಇರುವ ರೋಗ ನಿರೋಧಕ ಶಕ್ತಿಯನ್ನು ಕಡಿಮೆ ಮಾಡುತ್ತದೆ ಎಂದು ಎಚ್ಚರಿಸಲಾಗಿದೆ.

ಅಮೆರಿಕಾದ ಕೇಸ್ ವೆಸ್ಟರ್ನ್ ರಿಸರ್ವ್ ವಿಶ್ವವಿದ್ಯಾಲಯದ ಸಂಶೋಧಕರು ನಡೆಸಿದ ಸಂಶೋಧನೆಯಲ್ಲಿ ಡೆಲ್ಟಾ ರೂಪಾಂತರಕ್ಕಿಂತ ಓಮಿಕ್ರಾನ್ ರೂಪಾಂತರ 6-8 ಪಟ್ಟು ಹೆಚ್ಚು ಸಾಂಕ್ರಾಮಿಕವಾಗಿದೆ. ಆದರೆ ಅಪಾಯದಲ್ಲಿ ಶೇ.85 ರಷ್ಟು ಕಡಿಮೆ ಇದೆ.

ಡೆಲ್ಟಾಗೆ ಹೋಲಿಸಿದರೆ ಹೆಚ್ಚಿನ ಮಕ್ಕಳು ಓಮಿಕ್ರಾನ್ ಸೋಂಕಿಗೆ ಸಿಲುಕಿದ್ದಾರೆ. ಆದರೆ ತೀವ್ರ ಪರಿಣಾಮ ಎದುರಿಸಿಲ್ಲ ಎಂದು ಸಂಶೋಧನಾ ಪ್ರಾಧ್ಯಾಪಕ ಪಮೇಲಾ ಡೇವಿಸ್ ಹೇಳಿದ್ದಾರೆ.

ಅಮೆರಿಕಾದಲ್ಲಿ ಒಮಿಕ್ರಾನ್ ಸೋಂಕಿತ 22,772, ಡೆಲ್ಟಾ ಸೋಂಕಿತ 66 ಸಾವಿರಕ್ಕೂ ಹೆಚ್ಚು ಮಕ್ಕಳನ್ನು ಅಧ್ಯಯನ ತಂಡ ವಿಶ್ಲೇಷಿಸಿದೆ. ಜೊತೆಗೆ 6,51,640 ಕ್ಕೂ ಹೆಚ್ಚು ಮಕ್ಕಳ ಎಲೆಕ್ಟ್ರಾನಿಕ್ ಆರೋಗ್ಯ ದಾಖಲೆಗಳನ್ನು ಅಧ್ಯಯನ ನಡೆಸಲಾಗಿದೆ.

ಓಮಿಕ್ರಾನ್ ಸೋಂಕಿಗೆ ಒಳಗಾದ ಮಕ್ಕಳಲ್ಲಿ ಸರಾಸರಿ 1.5 ಮತ್ತು 1.7 ವರ್ಷಗಳ ಕಿರಿಯ ಮಕ್ಕಳಲ್ಲಿ ಕಡಿಮೆ ಕೊಮೊರ್ಬಿಡಿಟಿ ಹೊಂದಿದ್ದಾರೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಲಸಿಕೆ ಹಾಕದ ಅನೇಕ ಮಕ್ಕಳು ಸೋಂಕಿಗೆ ಒಳಗಾಗಿರುವುದರಿಂದ, ಮೆದುಳು, ಹೃದಯ, ಪ್ರತಿರಕ್ಷಣಾ ವ್ಯವಸ್ಥೆಗಳು ಮತ್ತು ಇತರ ಅಂಗಗಳ ಮೇಲೆ ದೀರ್ಘಕಾಲೀನ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಬೇಕಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

Swathi MG

Recent Posts

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

7 mins ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

12 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

24 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

28 mins ago

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

58 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

1 hour ago