Categories: ವಿದೇಶ

ಢಾಕಾ ಹತ್ಯೆ ಪ್ರಕರಣ: 20 ವಿದ್ಯಾರ್ಥಿಗಳಿಗೆ ಮರಣದಂಡನೆ ಶಿಕ್ಷೆ

ಢಾಕಾ : ಸಾಮಾಜಿಕ ಜಾಲತಾಣದಲ್ಲಿ ಸರ್ಕಾರವನ್ನು ಟೀಕಿಸಿ ಪೋಸ್ಟ್‌ ಮಾಡಿದ್ದ ವಿದ್ಯಾರ್ಥಿಯೊಬ್ಬನನ್ನು ಕಾಲೇಜು ಆವರಣದಲ್ಲೇ ತೀವ್ರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ 20 ವಿದ್ಯಾರ್ಥಿಗಳಿಗೆ ಢಾಕಾ ಕೋರ್ಟ್‌ ಮರಣದಂಡನೆ ಶಿಕ್ಷೆ ವಿಧಿಸಿದೆ. ಈ ಮೂಲಕ ಭವಿಷ್ಯದಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿರುವುದಾಗಿ ಕೋರ್ಟ್‌ ಹೇಳಿದೆ.

ಆರೋಪಿಗಳೆಲ್ಲರೂ ದೋಷಿಗಳೆಂದು ಸಾಬೀತಾಗಿದ್ದು, 5 ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ನ್ಯಾಯಮೂರ್ತಿ ಅಬು ಜಾಫರ್‌ ಮೊಹಮ್ಮದ್‌ ಕಮ್ರುಜ್ಜಾಮನ್‌ ಘೋಷಿಸಿದ್ದಾರೆ. ಒಟ್ಟು 25 ತಪ್ಪಿತಸ್ಥರ ಪೈಕಿ ಮೂವರು ಕೃತ್ಯ ನಡೆದಂದಿನಿಂದ ತಲೆಮರೆಸಿಕೊಂಡಿದ್ದು, ಉಳಿದ ಎಲ್ಲರೂ ಜೈಲಿನಲ್ಲಿದ್ದಾರೆ.

2019ರ ಅಕ್ಟೋಬರ್‌ 6ರಂದು, ಬಾಂಗ್ಲಾದೇಶದ ಇಂಜಿನಿಯರಿಂಗ್‌ ಮತ್ತು ಟೆಕ್ನಾಲಜಿ ವಿಶ್ವವಿದ್ಯಾಲಯದ ದ್ವಿತೀಯ ವರ್ಷದ ವಿದ್ಯಾರ್ಥಿ ಅಬ್ರಾರ್‌ ಫಹಾದ್‌ ಎಂಬುವವರನ್ನು ಕಾಲೇಜಿನ ಆವರಣದಲ್ಲಿ ಉದ್ರಿಕ್ತ ಗುಂಪೊಂದು ಭೀಕರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿತ್ತು. ಶಿಕ್ಷೆಗೊಳಗಾಗಿರುವ ವಿದ್ಯಾರ್ಥಿಗಳು ಕ್ರಿಕೆಟ್‌ ಬ್ಯಾಟ್‌ ಮತ್ತಿತರ ವಸ್ತುಗಳಿಂದ ಸುಮಾರು 6 ಗಂಟೆಗಳ ಕಾಲ ಫಹಾದ್‌ ಮೇಲೆ ಹಲ್ಲೆ ನಡೆಸಿದ್ದರು.

ಆಡಳಿತರೂಢ ಅವಾಮಿ ಲೀಗ್‌ ಪಕ್ಷದ ವಿದ್ಯಾರ್ಥಿ ಸಂಘಟನೆ ಬಾಂಗ್ಲಾದೇಶ್‌ ಛಾತ್ರ ಲೀಗ್‌ (ಬಿಸಿಎಲ್‌)ನ ಕಾರ್ಯಕರ್ತರು ಹಲ್ಲೆಯಲ್ಲಿ ಭಾಗಿಯಾಗಿದ್ದರು. 21 ವರ್ಷದ ವಿದ್ಯಾರ್ಥಿಯ ಹತ್ಯೆಗೆ ಸಂಬಂಧಿಸಿ ಬಾಂಗ್ಲಾದೇಶದೆಲ್ಲೆಡೆ ಪ್ರತಿಭಟನೆ ನಡೆದಿತ್ತು. ಕೃತ್ಯದ ಸಿಸಿಟಿವಿ ಫೂಟೇಜ್‌ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.

ಘಟನೆ ನಡೆದ ಬಳಿಕ ಬಿಸಿಎಲ್‌ ವಿದ್ಯಾರ್ಥಿ ಸಂಘಟನೆಯಿಂದ ಎಲ್ಲ ಆರೋಪಿಗಳನ್ನು ಅಮಾನತುಗೊಳಿಸಲಾಗಿದೆ. ಪ್ರಧಾನಿ ಶೇಖ್ ಹಸೀನಾ ಅವರೇ ಆರೋಪಿಗಳನ್ನು ಸಂಘಟನೆಯಿಂದ ಹೊರಹಾಕುವಂತೆ ಸೂಚಿಸಿದ್ದರು. ಕಾಲೇಜಿನಿಂದಲೂ ಅವರನ್ನು ಹೊರ ಹಾಕಲಾಗಿದೆ.

ಭಾರತ ಮತ್ತು ಬಾಂಗ್ಲಾ ನಡುವಣ ನದಿ ನೀರು ಹಂಚಿಕೆ ವಿಚಾರವಾಗಿ ಆಡಳಿತರೂಢ ಅವಾಮಿ ಲೀಗ್‌ ಸರ್ಕಾರವನ್ನು ಫಹಾದ್‌ ಫೇಸ್‌ಬುಕ್‌ನಲ್ಲಿ ಟೀಕಿಸಿದ್ದಕ್ಕೆ ವಿರೋಧಿ ಗುಂಪು ಸಿಟ್ಟಾಗಿತ್ತು ಎನ್ನಲಾಗಿದೆ.

Gayathri SG

Recent Posts

ಮುಜರಾಯಿ ಇಲಾಖೆಗೆ ಒಳಪಡುವ ದೇಗುಲಗಳಲ್ಲಿ ವಸ್ತ್ರಸಂಹಿತೆ ಜಾರಿಗೆ ಅಭಿಯಾನ

ಜಿಲ್ಲೆಯ ಮುಜರಾಯಿ ಇಲಾಖೆಗೆ ಒಳಪಡುವ ದೇಗುಲಗಳಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವ ಬಗ್ಗೆ ಮೇ8ರಂದು ಅಭಿಯಾನ ನಡೆಸಲು ಚಿಂತನೆ ನಡೆಸಲಾಗಿದೆ.

3 mins ago

ಪೆನ್‌ಡ್ರೈವ್‌ ಪ್ರಕರಣದಲ್ಲಿ 3-4 ಆತ್ಮಹತ್ಯೆ : ಜೆಡಿಎಸ್‌ ನಾಯಕ ಸ್ಫೋಟಕ ಮಾಹಿತಿ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣದಲ್ಲಿ ಜೆಡಿಎಸ್‌ ನಾಯಕ, ನಾಗಮಂಗಲ ಮಾಜಿ ಶಾಸಕ ಸುರೇಶ್ ಗೌಡ ಅವರು…

7 mins ago

ಪುಷ್ಪ ಸಿನಿಮಾ ಮಾಡಿ ನನ್ನ ಜೀವನ ಬದಲಾಗಿಲ್ಲ ಎಂದ ಬಹುಭಾಷಾ ನಟ ಫಾಹದ್ ಫಾಸಿಲ್

ಬಹುಭಾಷಾ ನಟ ಫಾಹದ್ ಫಾಸಿಲ್ ಪುಷ್ಪ ಸಿನಿಮಾದಿಂದ ನನ್ನ ಜೀವನ ಬದಲಾಗಿಲ್ಲ, ಪುಷ್ಪ ಮಾಡಿದ್ದಕ್ಕೆ ನನಗೇನು ಸಿಕ್ತು ಅನ್ನೋದು ತಪ್ಪು…

24 mins ago

ಪಿತ್ರೋಡಾ ಅವರ ‘ಜನಾಂಗೀಯ’ ಹೇಳಿಕೆಗೆ ತಿರುಗೇಟು ನೀಡಿದ ಪ್ರಧಾನಿ

 ಸ್ಯಾಮ್ ಪಿತ್ರೋಡಾ ಅವರ ‘ಜನಾಂಗೀಯ’ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಜನರನ್ನು ಅವರ ಬಣ್ಣದ ಆಧಾರದ ಮೇಲೆ…

26 mins ago

ʼಕೋವಿಶೀಲ್ಡ್ ಲಸಿಕೆ ಪಡೆದವರು ಡ್ಯಾನ್ಸ್ ಮಾಡುವಂತಿಲ್ಲʼ ಎಚ್ಚರಿಕೆ ನೀಡಿದ ಆಮಂತ್ರಣ ಪತ್ರಿಕೆ

ಕೊರೊನಾ ಲಸಿಕೆ ಕೋವಿಶೀಲ್ಡ್​ ಅಭಿವೃದ್ಧಿ ಪಡಿಸಿದ್ದ ದೈತ್ಯ ಫಾರ್ಮಾ ಕಂಪನಿ ಅಸ್ಟ್ರಝೆನೆಕಾ, ಕೋರ್ಟ್​ ಮುಂದೆ ಸತ್ಯವೊಂದನ್ನು ಒಪ್ಪಿಕೊಂಡಿದೆ. ಅದು ಏನೆಂದರೆ…

50 mins ago

ಸಾಮಾಜಿಕ ಜಾಲತಾಣದಲ್ಲಿ ಸುಳ್ಳುಸುದ್ದಿ ಹರಡಿದರೆ ಕಠಿಣ ಕ್ರಮ: ಪೊಲೀಸ್ ಇಲಾಖೆ

ಸಾಮಾಜಿಕ ಜಾಲತಾಣಗಳಲ್ಲಿ ಬೇರೆ-ಬೇರೆ ಸಮುದಾಯ, ಜಾತಿ, ಧರ್ಮ, ವ್ಯಕ್ತಿಗಳ ವಿರುದ್ಧ ಉದ್ದೇಶ  ಪೂರ್ವಕವಾಗಿ ಸುಳ್ಳು ಸುದ್ದಿಗಳನ್ನು ಹರಿಬಿಡುವುದು ಹಾಗೂ ತಮಾಷೆಗಾಗಿ…

59 mins ago