Categories: ವಿದೇಶ

ನ್ಯೂಯಾರ್ಕ್‌ನ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ, 19 ಸಾವು

ನ್ಯೂಯಾರ್ಕ್: ಅಮೆರಿಕದ ನ್ಯೂಯಾರ್ಕ್‌ನ ಅಪಾರ್ಟ್‌ಮೆಂಟ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಒಂಬತ್ತು ಮಕ್ಕಳು ಸೇರಿದಂತೆ ಕನಿಷ್ಠ 19 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ 13 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ.

ಸುಮಾರು 200 ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡರು. ಡುಪ್ಲೆಕ್ಸ್ ಕಟ್ಟಡದಲ್ಲಿ ಬೆಂಕಿಯ ಕೆನ್ನಾಲಗೆಯಿಂದ ತಪ್ಪಿಸಿಕೊಳ್ಳಲು ಹರಸಾಹಸಪಡಬೇಕಾಯಿತು.

ನ್ಯೂಯಾರ್ಕ್‌ನ ಬ್ರಾಂಕ್ಸ್‌ನಲ್ಲಿರುವ ವಸತಿ ಸಮುಚ್ಚಯದಲ್ಲಿ ಎಲೆಕ್ಟ್ರಿಕ್ ಸ್ಪೇಸ್ ಹೀಟರ್‌ನಲ್ಲಿ ದೋಷ ಕಾಣಿಸಿಕೊಂಡಿರುವುದೇ ಅಗ್ನಿ ಅವಘಡಕ್ಕೆ ಕಾರಣವಾಗಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ 19 ಅಂತಸ್ತಿನ ಕಟ್ಟಡದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಯಿಂದಾಗಿ ಬಹುಮಹಡಿ ಕಟ್ಟಡದಲ್ಲಿ ದಟ್ಟವಾದ ಹೊಗೆ ಹರಡಿತ್ತು. ಇದರಿಂದ ಹಲವರಲ್ಲಿ ಉಸಿರಾಟದ ತೊಂದರೆ ಎದುರಾಗಿತ್ತು.

ಸಮೀಪ ಕಾಲಘಟ್ಟದಲ್ಲಿ ಅಮೆರಿಕದಲ್ಲಿ ನಡೆದ ಅತಿ ದೊಡ್ಡ ಅಗ್ನಿ ದುರಂತ ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Swathi MG

Recent Posts

ಮದ್ದೂರು ಅರಣ್ಯದಲ್ಲಿ ಬೆಂಕಿ ಅವಘಡ : ಆರೋಪಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಮದ್ದೂರು ವಲಯದಲ್ಲಿ ಕಳೆದ ಏಪ್ರಿಲ್ 24 ರಂದು ಬೆಂಕಿ ಅವಘಡ ಸಂಭವಿಸಿ ಅಪಾರ ಪ್ರಮಾಣದ…

4 mins ago

ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆ: ಹವಮಾನ ಇಲಾಖೆ

ಸಿಲಿಕಾನ್​ ಸಿಟಿ ಮಂದಿಗೆ ಮತ್ತೆ ಮಳೆರಾಯ ತಂಪೆರೆದಿದ್ದಾನೆ. ದಿಢೀರ್​ ಮಳೆಯಿಂದ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ. ಬೆಂಗಳೂರು ಸೇರಿದಂತೆ…

7 mins ago

ʼನಾನು ನೋಡೋಕೆ ಅಷ್ಟೇನೂ ಚೆನ್ನಾಗಿಲ್ಲ ಅಂತ ಒಳ್ಳೆಯ ಸಿನಿಮಾ ಅವಕಾಶಗಳು ಬರಲಿಲ್ಲʼ

ಟಾಲಿವುಡ್​ ನಟ ಅಲ್ಲು ಅರ್ಜುನ್​ ನಟಿಸಿದ ‘ಆರ್ಯ’ ಸಿನಿಮಾ ತೆರೆಕಂಡು 20 ವರ್ಷ ಕಳೆದಿದೆ. ಆ ದಿನಗಳು ಹೇಗಿದ್ದವು ಎಂಬುದನ್ನು…

17 mins ago

ಮಳೆ ಸುರಿದ ಖುಷಿಗೆ ಕಾಡು ಬಸವೇಶ್ವರನಿಗೆ ವಿಶೇಷ ಪೂಜೆ

ನಂಜನಗೂಡು ತಾಲೂಕಿನ  ಈಶ್ವರಗೌಡನ ಹಳ್ಳಿ ಗ್ರಾಮದಲ್ಲಿ  ವರ್ಷದ ಮೊದಲ ಮಳೆ ಸುರಿದ ಹಿನ್ನೆಲೆಯಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ರಾಜ್ಯದ ಜನತೆಗೆ ಹಾಗೂ ರೈತರಿಗೆ…

24 mins ago

ಮತದಾನದ ಮರುದಿನ ಆಲಗೂರ್ ನಿರಾಳ: ಸಚಿವ ಪಾಟೀಲರ ಜೊತೆ ಊಟ, ಮನೆಯವರ ಜೊತೆ ಮಾತು

ಲೋಕಸಭೆ ಚುನಾವಣೆ ಮಂಗಳವಾರ ಮುಗಿದು ಹೋಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಮತದಾನದ ಮರು ದಿನ ನಿರಾಳ ನಗೆ ಬೀರುತ್ತ ಓಡಾಡಿದ್ದು ಕಂಡು…

42 mins ago

ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನ: ಅಪ್ರಾಪ್ತನ ಬಂಧನ

ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನಸಿದ ಘಟನೆ ಮೇ 6ರಂದು ನಡೆದಿದ್ದು,…

47 mins ago